C. T. Ravi ಸತತವಾಗಿ ಕ್ಷೇತ್ರದಲ್ಲಿ 4 ಬಾರಿ ವೀರಶೈವ ಲಿಂಗಾಯಿತ ಸಮು ದಾಯದ ಸಹಕಾರದೊಂದಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಸಿ.ಟಿ.ರವಿ ಅವರು ಇದೀಗ ಜನಾಂಗದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿಕೆ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ತಾಲ್ಲೂಕು ಸಂಚಾಲಕ ಯು.ಎಸ್.ಹೇಮಂತ್‌ಕುಮಾರ್ ಖಂಡಿಸಿದ್ದಾರೆ.
ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಲಿಂಗಾಯಿತ ಸಮುದಾಯವು ಬಿಜೆಪಿಯಿಂದ ದೂರ ಸರಿಯುತ್ತಿದೆ. ಈ ಸಮುದಾಯದ ನಾಯಕರಿಗೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿಲ್ಲ. ಹಾಗೂ ಯಡಿಯೂರಪ್ಪ ನವರು ಸಹ ಹೈಕಮಾಂಡ್ ಆದೇಶವನ್ನು ಪಾಲಿಸಬೇಕು ಎಂದು ಅವಹೇಳನಕಾರಿ ಹೇಳಿಕೆ ನೀಡಿ ಸಮುದಾಯ ವನ್ನು ನಿಂದಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದಿದ್ದಾರೆ.
ಸಮುದಾಯದ ನಾಯಕ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಬಳಸಿಕೊಂಡು ಇಪ್ಪತ್ತು ವರ್ಷಗಳ ಕಾಲ ಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯವನ್ನು ಓಲೈಸಿ ಮತ ಪಡೆದುಕೊಂಡು ಈಗ ಆ ಸಮುದಾ ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದು ಸರಿಯೇ ಎಂದ ಅವರು ಇದೇ ರೀತಿ ಮುಂದುವರೆದಲ್ಲಿ ಕ್ಷೇತ್ರದಲ್ಲಿ ಲಿಂಗಾಯಿತ ಸಮುದಾಯವು ಬಿಜೆಪಿಯನ್ನು ಪರಾಭವಗೊಳಿಸಲು ಸನ್ನದ್ದರಾಗವಾಗಲಿದೆ ಎಂದಿದ್ದಾರೆ.
C. T. Ravi ಶಾಸಕ ರವಿಯವರು ಪಕ್ಷನಿಷ್ಟೆಯಿಂದ ಎಲ್ಲವನ್ನು ನಿಭಾಯಿಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದಂತಹ ವೀರಶೈವ ಸಮುದಾಯವನ್ನು ತುಳಿಯುವ ಹೇಳಿಕೆ ನೀಡ ನೀಡಿರುವುದು ನಿಮ್ಮ ಸಂಸ್ಕೃತಿಯೇ. ರಾಜಕೀಯವಾಗಿ ಬೆಳೆಯುವ ಸಂದರ್ಭದಲ್ಲಿ ಸಮುದಾಯವನ್ನು ಬಳಸಿಕೊಂಡು ಇದೀಗ ಬೆಳೆದ ನಂತರ ಆ ಜನಾಂಗಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದಿದ್ದಾರೆ.
ಕೂಡಲೇ ಶಾಸಕ ಸಿ.ಟಿ.ರವಿ ಅವರು ವೀರಶೈವ ಸಮುದಾಯ ಹಾಗೂ ಯಡಿಯೂರಪ್ಪ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರದ ಬಹುಸಂಖ್ಯಾತ ಲಿಂಗಾಯಿತ ಸಮುದಾಯವು ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.