Tuesday, October 1, 2024
Tuesday, October 1, 2024

Shivamogga Krushimela ಅದ್ದೂರಿ ಉದ್ಘಾಟನೆಗೊಂಡ ಕೃಷಿ ಮೇಳ

Date:

Shivamogga Krushimela ಕೃಷಿಮೇಳ ಒಂದು ಸಾಂಕೇತಿಕವಾಗಿದೆ. ರೈತರು ಹಾಗೂ ವಿಶ್ವವಿದ್ಯಾಲಯ ಒಂದುಗೂಡಿ ಹೊಸ ಜ್ಯೋತಿ ಬೆಳಗಬೇಕು. ಈ ಕೃಷಿಮೇಳ ಮೂಲಕ ಅದು ನೆರವೇರಿದೆ ಎಂದು ಪ್ರಗತಿಪರ ರೈತರು, ರಾಷ್ಟ್ರ ಪ್ರಶಸ್ತಿ ವಿಜೇತರಾಗಿರುವ ಪ್ರಕಾಶ್ ಮಂಚಾಲೆಯವರು ತಿಳಿಸಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಮಾ.17ರಿಂದ 20ರವರೆಗೆ ನವುಲೆ ಕೃಷಿ ಮತ್ತು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮತ್ತು ತೋಟಗಾರಿಕೆ ಮೇಳವನ್ನ ಉದ್ಘಾಟಿಸಿ ಮಾತನಾಡಿದರು.
ಕೃಷಿ ಮೇಳ ನಡೆಯುತ್ತಿರುವುದು ಉತ್ತಮ ಕಾರ್ಯ. ಇಲ್ಲಿ ಹೊಸ ಹೊಸ ಆವಿಷ್ಕಾರಗಳ ವ್ಯವಸ್ಥೆಯನ್ನು ಗಮನಿಸಬಹುದು. ಕೃಷಿಯಲ್ಲಿ ಹೊಸ ಹೊಸ ಆವಿಷ್ಕಾರಗಳು, ಸುಧಾರಣೆಗೆ, ಇಂತಹ ಕೃಷಿ ಮೇಳಗಳು ಅತ್ಯಗತ್ಯ ಎಂದರು.

ಈಗ ತಾಂತ್ರಿಕತೆ ಉತ್ತುಂಗಕ್ಕೆ ಹೋಗುತ್ತಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಅಲ್ಲಲ್ಲಿ ಅಭಿವೃದ್ಧಿ ಕಾಣುತ್ತಿದೆ ಅಷ್ಟೇ.. ಬೆಳೆ ಬೆಳೆದ ಪ್ರತಿಯೊಬ್ಬ ರೈತನ ಬೆಳೆಗೂ ಸೂಕ್ತ ಮಾರುಕಟ್ಟೆ ದೊರೆತಾಗಲೇ ರೈತರಿಗೆ ನೆಮ್ಮದಿ ಎಂದು ತಿಳಿಸಿದರು.

ಸಾವಯುವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಮಣ್ಣು ಮಹತ್ವ ಮತ್ತು ಮಣ್ಣಿನಲ್ಲಿನ ಸೂಕ್ಷ್ಮ ಜೀವಿಯ ಬಗ್ಗೆ ರೈತರಿಗೆ ಜ್ಞಾನ ನೀಡಬೇಕು. ಶೇಕಡ 83 ರಷ್ಟು ಅತಿ ಸಣ್ಣ ರೈತರಿದ್ದು, ಸ್ವಲ್ಪ ಭೂಮಿಯಲ್ಲಿ ಹೆಚ್ಚು ಬೆಳೆ ಬೆಳೆಯುವ ಸಾವಯವ ಕೃಷಿ ಬಗ್ಗೆ ಹೆಚ್ಚಿನ ಗಮನ ನೀಡುವಂತಾಗಬೇಕೆಂದರು.

ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಬಿ. ಹೇಮ್ಲಾ ನಾಯಕ್ ಪ್ರಾಸ್ತಾವಿಕ ನುಡಿಗಳ ನಾಡುತ್ತಾ,ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಈ ಕೃಷಿ ಮೇಳ ರೈತರಿಗೆ ಹಬ್ಬದಂತಿದೆ. ಪ್ರತಿವರ್ಷವೂ ರೈತರಿಗಾಗಿ ನಮ್ಮ ತಾಂತ್ರಿಕತೆಯನ್ನು ಪರಿಚಯಿಸುವುದು. ಹೊಸ ಅನುಷ್ಕಾರಗಳ ಬಗ್ಗೆ ಮಾಹಿತಿ ನೀಡುವುದನ್ನ ನಿರಂತರವಾಗಿ ಮಾಡಲಾಗುತ್ತಿದೆ. ಅದಕ್ಕೆ ನಮ್ಮ ಕೃಷಿ ಮತ್ತು ತೋಟಗಾರಿಕಾ ಮೇಳ ಪೂರಕವಾಗಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಕೃಷಿ ಮೇಳ ಹಲವಾರು ರೈತರಿಗೆ ಅನುಕೂಲಕರವಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಸಿ. ವಾಸುದೇವಪ್ಪನವರು ಮಾತನಾಡಿ, ಹೊಸ ಆವಿಷ್ಕಾರಗಳು, ವಿವಿಧ ತಳಿಗಳು, ರೋಗ ನಿಯಂತ್ರಣ, ಸಾವಯವ ಕೃಷಿ ಜೊತೆಗೆ ಸಮಗ್ರ ಕೃಷಿ ಪರಿಚಯವನ್ನ ಈ ಕೃಷಿ ಮೇಳ ಮಾಡಿ ಕೊಡುತ್ತಿದೆ. ಮೊದಲೆಲ್ಲ ಶಿವಮೊಗ್ಗದಲ್ಲಿ ಎಲ್ಲಿ ನೋಡಿದರೂ ಭತ್ತದ ಹಸಿರು ಕಾಣುತ್ತಿತ್ತು. ಇತ್ತೀಚೆಗೆ ಹೆಚ್ಚಿನ ಲಾಭದ ಉದ್ದೇಶದಿಂದ ಅಡಿಕೆ ಮತ್ತು ಪ್ಲಾಂಟೇಶನ್ ಕಡೆ ರೈತರು ವಾಲುತ್ತಿದ್ದಾರೆ . ಅಡಿಕೆಗೆ ಮೌಲ್ಯವರ್ಧನೆ ಮಾಡಲು ಅನೇಕ ಅವಕಾಶ ಇರುವುದರಿಂದ ಹೆಚ್ಚಿನ ಬೇಡಿಕೆ ಇದ್ದೇ ಇದೆ. ಇದರೊಂದಿಗೆ ರೈತರು ಸಮಗ್ರ ಮಾಹಿತಿಯನ್ನು ಕಲೆಹಾಕಿ, ಮೌಲ್ಯವರ್ಧಿಸುವ ಕುರಿತು ಗಮನಹರಿಸಬೇಕು ಎಂದರು.

Shivamogga Krushimela ಅಧ್ಯಕ್ಷತೆ ವಹಿಸಿದ್ದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್. ಸಿ ಜಗದೀಶ್ ಅವರು ಮಾತನಾಡಿ, ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ರೈತರಿಗಾಗಿ ಜಾತ್ರೆಯಂತೆ ನಾವು ಆಯೋಜಿಸಿದ್ದೇವೆ. ಈ ವರ್ಷದ ಕೃಷಿ ಮತ್ತು ತೋಟಗಾರಿಕಾ ಮೇಳದ ಧ್ಯೇಯ ವಾಕ್ಯವು ಸುಸ್ಥಿರ ಆದಾಯಕ್ಕಾಗಿ – ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ ಎಂಬುದಾಗಿದೆ. ಪ್ರಸ್ತುತ ವರ್ಷವನ್ನು ಅಂತರಾಷ್ಟ್ರೀಯ ಸಿಹಿಧಾನ್ಯ ವರ್ಷವನ್ನಾಗಿ ಘೋಷಿಸಿದ್ದು, ಅತ್ಯಂತ ಮಹತ್ವದ ವರ್ಷವಾಗಿದೆ . ನೈಸರ್ಗಿಕ, ಸಾವಯವ ಕೃಷಿ, ಕೃಷಿ ತಾಂತ್ರಿಕತೆ, ಗೊಬ್ಬರ, ಸಸಿ ಸೇರಿದಂತೆ ಒಂದೇ ಸೂರಿ ನಡಿ ರೈತರಿಗೆ ಅಗತ್ಯವಾದ ಎಲ್ಲಾ ರೀತಿಯ ಸಲಹೆ ಮತ್ತು ಪರಿಹಾರ ಒದಗಿಸುವ ಉದ್ದೇಶದಿಂದ ಈ ಕೃಷಿ ಮೇಳವನ್ನು ಆಯೋಚಿಸಲಾಗಿದೆ ಎಂದರು.

ನಾಲ್ಕು ದಿನಗಳು ನಡೆಯುವ ಈ ಕೃಷಿ ಮೇಳದಲ್ಲಿ, ಪ್ರಗತಿಪರ ರೈತರನ್ನ ಪರಿಚಯಿಸಲಿದ್ದೇವೆ. ಸುತ್ತಮುತ್ತಲಿನ ಏಳು ಜಿಲ್ಲೆಗಳಿಂದ ಉತ್ತಮ ಸಹಕಾರ ದೊರೆತಿದೆ.

ಮಾರ್ಚ್ 17 ರಿಂದ ಮಾರ್ಚ್ 20ರವರೆಗೆ ನಡೆಯುವ ಈ ಮೇಳದಲ್ಲಿ ಪ್ರತಿ ದಿನವೂ ವಿವಿಧ ಪ್ರಗತಿಪರ ರೈತರೊಂದಿಗೆ ಅಡಿಕೆ ಕೃಷಿಯ ಸವಾಲುಗಳು, ಸೆಕೆಂಡರಿ ಕೃಷಿ ಮತ್ತು ಮೌಲ್ಯವರ್ಧನೆ, ಸಿಹಿ ಧಾನ್ಯಗಳ ಮಹತ್ವ ಮತ್ತು ಸಂಗ್ರಹ ಕೃಷಿ ಪದ್ಧತಿಗಳು, ಹೀಗೆ ವಿವಿಧ ಕೃಷಿ ಸಂಬಂಧಿತ ವಿಚಾರವಾಗಿ ಸಂವಾದ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ವೇದಿಕೆಯಲ್ಲಿ ವಿವಿಧ ತಾಂತ್ರಿಕತೆಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಶ್ರೀ ದೊಡ್ಡೇಗೌಡ ಸಿ. ಪಾಟೀಲ್, ಕೃಷಿ ವಿಶ್ವವಿದ್ಯಾಲಯದ ಡಾ. ಎಚ್. ಎಲ್. ಹರೀಶ್, ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು , ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...