Friday, June 13, 2025
Friday, June 13, 2025

International Women’s Day ಜನರು ಕೇಂದ್ರ ಮತ್ತು ರಾಜ್ಯಸರ್ಕಾರದ ಯೋಜನೆಗಳ ಆರ್ಥಿಕ ಸೌಲಭ್ಯ ಪಡೆಯಬೇಕು- ಮೂಕಪ್ಪ ಕರಭೀಮಣ್ಣನವರ್

Date:

International Women’s Day  ಶಿವಮೊಗ್ಗ, ಮಹಿಳೆಯರ ಸ್ವಾವಲಂಬಿ ಬದುಕಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆಯು ಊರುಗೋಲು ಆಗಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಸದುಪಯೋಗ ಪಡಿಸಿಕೊಳ್ಳುವಲ್ಲಿ ಶಿವಮೊಗ್ಗ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅನುಕೂಲ ಪಡೆದುಕೊಂಡಿದೆ. ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯು ಉತ್ತಮ ಸ್ಥಾನದಲ್ಲಿದೆ ಎಂದು ಶಿವಮೊಗ್ಗ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮೂಕಪ್ಪ ಕರಭೀಮಣ್ಣನವರ್ ಹೇಳಿದರು.

ಶಿವಮೊಗ್ಗ ನಗರದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಂದಿನ ವರ್ಷಗಳಲ್ಲಿಯೂ ಶಿವಮೊಗ್ಗ ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಯೋಜನೆಗಳ ಆರ್ಥಿಕ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು. ಆರ್ಥಿಕ ಸೌಲಭ್ಯಗಳ ಪರಿಣಾಮಕಾರಿ ಬಳಕೆಯಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು. ಉದ್ಯಮ ಕ್ಷೇತ್ರದಲ್ಲಿಯೂ ಮಹಿಳೆಯರು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಧಿಕಾರಿ ಎಚ್.ಎಂ.ಸುರೇಶ್ ಮಾತನಾಡಿ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಯಶಸ್ಸು ಸಾಧಿಸುತ್ತಿದ್ದು, ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರೆ ಇನ್ನಷ್ಟು ಜನರಿಗೆ ಸ್ಫೂರ್ತಿ ಸಿಗುತ್ತದೆ. ಮಹಿಳೆಯರು ಸಾಧಕರ ಜೀವನಗಾಥೆ ಅರಿತುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.

ಮಹಿಳೆಯರಿಗೆ ಕಾನೂನು ಸಮಾನ ಅವಕಾಶ ನೀಡುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಹ ವಿವಿಧ ಯೋಜನೆಗಳ ಮೂಲಕ ಆರ್ಥಿಕ ಸಹಕಾರ ಒದಗಿಸುವ ಕೆಲಸ ಮಾಡುತ್ತಿವೆ. ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ಹೊಸ ಆಲೋಚನೆಗಳ ಮೂಲಕ ಉದ್ಯಮಗಳನ್ನು ಆರಂಭಿಸಿ ಯಶಸ್ಸು ಸಾಧಿಸಬೇಕು ಎಂದು ತಿಳಿಸಿದರು.

International Women’s Day ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿಯಾದರೆ ಕುಟುಂಬವು ಆರ್ಥಿಕವಾಗಿ ಶಕ್ತವಾಗುತ್ತದೆ. ಇದರಿಂದ ಗ್ರಾಮ, ಪಟ್ಟಣ, ನಗರ, ಜಿಲ್ಲೆ, ರಾಜ್ಯದ ಅಭಿವೃದ್ಧಿ ಆಗುತ್ತದೆ. ಮಹಿಳೆಯರು ಇಲಾಖೆ ವತಿಯಿಂದ ಸಿಗುವ ಎಲ್ಲ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿದರು. ಹಾಸ್ಯ ಭಾಷಣಗಾರ್ತಿ ಇಂದುಮತಿ ಸಾಲಿಮಠ ಅವರು ಹಾಸ್ಯ ಭಾಷಣ ನಡೆಸಿಕೊಟ್ಟರು. ಲಕ್ಷ್ಮಣ್ ಮತ್ತು ತಂಡದವರು ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಡೊಳ್ಳು ಕುಣಿತ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್, ಕಲಾವಿದೆ ವಿಜಯಲಕ್ಷ್ಮೀ, ಮಹಿಳಾ ಉದ್ಯಮಿ ಸರೋಜಾ, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ, ಇಲಾಖೆಯ ಸಮನ್ವಯ ಕಾಶಿ, ಡಾ. ದೇವೆಂದ್ರನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...