Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಭಾರತಿ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ. ರೋಟರಿ ಜಿಲ್ಲಾ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್ ಅವರ ಪತ್ನಿ ಭಾರತಿ ಚಂದ್ರಶೇಖರ್ ಅವರು ಇದೀಗ 3ನೇ ಬಾರಿ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಭಾರತಿ ಚಂದ್ರಶೇಖರ್ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿಯು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲಾ ಗೈಡ್ ಕಮೀಷನರ್ ಆಗಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ 38 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಮಾಡಿದ್ದಾರೆ.
Scouts and Guides ಅಂತರಾಷ್ಟ್ರೀಯ ಇನ್ನರ್‌ವ್ಹೀಲ್, ಜಿಲ್ಲಾ ಚೇರ‍್ಮನ್ ಆಗಿ ಯಶಸ್ವಿಯಾಗಿ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕೀರ್ತಿ ಇವರದು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ನಿರ್ದೇಶಕಿ, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಉಪಾಧ್ಯಕ್ಷೆ, ಜಿಲ್ಲಾ ಬಳಕೆದಾರರ ವೇದಿಕೆ ಹಾಗೂ ವಿವಿಧ ಸೇವಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಭಾರತೀಯ ಕುಟುಂಬ ಯೋಜನಾ ಸಂಸ್ಥೆ ಶಿವಮೊಗ್ಗ ಶಾಖೆಯ ಉಪಾಧ್ಯಕ್ಷೆ, ಜನಶಿಕ್ಷಣ ಸಂಸ್ಥೆಯ ಮಾಜಿ ಕಾರ್ಯಕಾರಿ ಸಮಿತಿ ಸದಸ್ಯೆ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭೆಯ ರಾಜ್ಯ ಮಹಿಳಾ ಘಟಕದ ಉಪಾಧಕ್ಷೆ, ಕನ್ನಡ ಸಾಹಿತ್ಯ ಪರಿಷತ್, ಗಮಕ ಪರಿಷತ್, ಅಖಿಲ ಭಾರತ ಲೇಖಕಿಯರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ ಮೈಸೂರ ಶ್ರೀ ಶಿವರಾತ್ರಿಶ್ವರ ಗುರುಗಳಿಂದ ಕಡಲಿಗೆ ಶ್ರೀ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.