Sunday, July 13, 2025
Sunday, July 13, 2025

Reservation of Scheduled Castes ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ವಿಳಂಬ ನೀತಿಗೆ ದಲಿತಪರ ಸಂಘಟನೆಗಳ ಪ್ರತಿಭಟನೆ

Date:

Reservation of Scheduled Castes  ಚಿಕ್ಕಮಗಳೂರಿನ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯಸರ್ಕಾರ ವಿಳಂಭ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸ ಲಾತಿ ಜಾರಿ ಹೋರಾಟ ಸಮಿತಿ ಹಾಗೂ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಆಜಾದ್ ಪಾರ್ಕ್ನಲ್ಲಿ ಮಂಗಳವಾರ ಮುಖಂಡರುಗಳು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಸಂವಿಧಾನದಲ್ಲಿ ಸಮಾನತೆಯನ್ನು ಸಾಧಿಸಲು ಸಮಪಾಲು, ಸಮಬಾಳು ನ್ಯಾಯದ ತತ್ವದಡಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಕ್ಕೋತ್ತಾಯ ಹೋರಾಟವು ಇಪ್ಪತ್ತೈದು ವರ್ಷಗಳನ್ನು ಪೂರೈಸಿದೆ ಎಂದರು.

Reservation of Scheduled Castes  ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಶಿಫಾರಸ್ಸು ಮಾಡಲು ಮತ್ತು ಸಂವಿಧಾನ ಪರಿಚ್ಚೇಧ ತಿದ್ದುಪಡಿ ತರುವಂತೆ ರಾಜ್ಯಸರ್ಕಾರಗಳಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಸಾವಿರಾರು ಜನರಿಂದ ಬೃಹತ್ ಸಮಾ ವೇಶವಾಗಿ ಮಾರ್ಪಾಟ್ಟ ಹೋರಾಟವು ನೂರನೇ ದಿನ ನಿರಂತರವಾಗಿ ಮುಂದುವರೆದಿದೆ ಎಂದು ತಿಳಿಸಿದರು.

ಬಹುಸಂಖ್ಯಾತ ಜನಾಂಗವನ್ನು ಹೊಂದಿರುವ ಪರಿಶಿಷ್ಟರು ಮೀಸಲಾತಿಯನ್ನು ಪಡೆಯುವ ಸಲುವಾಗಿ ಭಿಕ್ಷೆ ಬೇಡುವ ಸ್ಥಿತಿಗೆ ಬಂದೊದಗಿದೆ. ಚುನಾವಣಾ ಸಮಯದಲ್ಲಿ ಕೇವಲ ಮತಬ್ಯಾಂಕ್‌ನ್ನಾಗಿ ಬಳಸಿಕೊಂಡು ಸೌಲಭ್ಯಗಳನ್ನು ನೀಡದೇ ಸತಾಯಿಸುವ ಕಾರ್ಯ ಮಾಡಲಾಗುತ್ತಿದ್ದು ಸಮುದಾಯವು ಎಚ್ಚೆತ್ತುಕೊಂಡು ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದರು.

ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ ಮಾದಿಗ, ಛಲವಾದಿ, ತ್ರಿಮತಸ್ಥ ಚರ್ಮ ಕಾರರು ಮತ್ತು ಅಲೆಮಾರಿಗಳ ಸಮುದಾಯಗಳ ಬಹು ವರ್ಷಗಳ ಒತ್ತಾಯವಾಗಿರುವ ನ್ಯಾ.ಎ.ಜೆ.ಆಯೋಗದ ವರದಿಯನ್ನು ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಡಳಿತ ರೂಢ ಬಿಜೆಪಿ ಸರ್ಕಾರಕ್ಕೆ ಕಟ್ಟಕಡೆಯ ಎಚ್ಚರಿಕೆಯಾಗಿದೆ ಎಂದು ತಿಳಿಸಿದರು.

ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರೊಳಗೆ ಸಮುದಾಯದ ಒತ್ತಾಯದ ಶಿಫಾರಸ್ಸು ಕೇಂದ್ರ ಸರ್ಕಾರಕ್ಕೆ ರವಾನೆಯಾಗದಿದ್ದರೆ ಈ ಹಿಂದೆ ಕಾಂಗ್ರೆಸ್ ಪಕ್ಷ ಸೋಲುಭವಿಸಿದ ರೀತಿಯಲ್ಲೇ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಸೋಲಾನುಭವಿಸುವ ಕಾಲ ಸನ್ನಿತಹಿತವಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ದಸಂಸ ಜಿಲ್ಲಾ ಸಂಚಾಲಕ ಶ್ರೀಕಾಂತ್ ಮಾತನಾಡಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮತ್ತು ಅನುಚ್ಚೇಧ ತಿದ್ದುಪಡಿ ಮಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿಗಳ ಜನಸಂಖ್ಯೆಗೆ ತಕ್ಕಂತೆ ಪ್ರಾತಿನಿಧ್ಯ ಕಲ್ಪಿಸಬೇಕು. 43 ಸಾವಿರ ಪೌರ ಕಾರ್ಮಿಕರು ಮತ್ತು ವಾಹನ ಚಾಲಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಭಟನೆ ನಂತರ ಮುಖಂಡರುಗಳು ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಬಿ.ಟಿ.ಚಂದ್ರಶೇಖರ್, ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ್, ಮುಖಂಡರುಗಳಾದ ಎನ್.ಗಿರೀಶ್, ಬಿ.ಜಿ.ಮೈಲಾರಪ್ಪ, ರವಿಕುಮಾರ್, ಬಿ.ಎನ್.ಮಲ್ಲಿಕಾರ್ಜುನ, ಗಂಗರಾಜು, ಕುಮಾರ್, ನಾಗರಾಜ್, ಸಗನಪ್ಪ, ವಸಂತ್‌ಕುಮಾರ್ ಮತ್ತತಿರರು ಹಾಜರಿದ್ದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...