Tuesday, October 1, 2024
Tuesday, October 1, 2024

Canara bank ಸಕಾಲದಲ್ಲಿ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಮುಟ್ಟಿಸಿ-ಬಿ.ವೈ.ರಾಘವೇಂದ್ರ

Date:

Canara bank ಸರ್ಕಾರದ ವಿವಿಧ ಯೋಜನೆಗಳಲ್ಲಿ ಅರ್ಹರಾಗಿರುವ ಫಲಾನುಭವಿಗಳಿಗೆ ಜಿಲ್ಲೆಯಲ್ಲಿ ಕೆಲವು ಬ್ಯಾಂಕುಗಳಿಂದ ಸಕಾಲದಲ್ಲಿ ಅಗತ್ಯ ಸೌಲಭ್ಯ ದೊರೆಯದಾಗಿದೆ. ಅಲ್ಲದೇ ಸರ್ಕಾರಿ ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣದಾಗಿದೆ. ಆದ್ದರಿಂದ ಚುನಾವಣೆ ಮುಗಿಯುತ್ತಿದ್ದಂತೆಯೇ ಪ್ರಗತಿ ಸಾಧಿಸದಿರುವ ಬ್ಯಾಂಕುಗಳ ವ್ಯವಸ್ಥಾಪಕರನ್ನು ಕರೆದು ಸಮಾಲೋಚನೆ ನಡೆಸಿ, ಅಗತ್ಯ ಸೂಚನೆ ನೀಡುವಂತೆ ಸಾಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ವ್ಯವಸ್ಥಾಪಕರಿಗೆ ಸೂಚಿಸಿದರು.

Canara bank ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಏರ್ಪಡಿಸಿದ್ದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸೌಲಭ್ಯಗಳನ್ನು ಒದಗಿಸುವಲ್ಲಿ ಫಲಾನುಭವಿಗಳು ದಾಖಲೆ ಒದಗಿಸುವಲ್ಲಿನ ನ್ಯೂನತೆಗಳು ಒಂದೆಡೆಯಾದರೆ, ಬ್ಯಾಂಕುಗಳ ಅಧಿಕಾರಿ-ಸಿಬ್ಬಂಧಿಗಳ ವಿಳಂಬ ಧೋರಣೆಯೂ ಕಾರಣವಾಗಿದೆ. ಬ್ಯಾಂಕುಗಳ ವ್ಯವಸ್ಥಾಪಕರು ಸೌಲಭ್ಯವನ್ನು ಅಪೇಕ್ಷಿಸಿ, ಬ್ಯಾಂಕುಗಳಿಗೆ ಬರುವ ಅರ್ಜಿದಾರರಿಗೆ ವಿನಃಕಾರಣ ಅಲೆದಾಡಿಸದೆ, ಸಕಾರಣವಿಲ್ಲದೇ ಅರ್ಜಿಗಳನ್ನು ತಿರಸ್ಕರಿಸಿದೆ ಸೌಲಭ್ಯಗಳನ್ನು ಒದಗಿಸುವಲ್ಲಿ ಗಮನಹರಿಸುವಂತೆ ಸೂಚಿಸಿದರು.

ಅರ್ಹ ನಾಗರಿಕರಿಗೆ ಸರ್ಕಾರದ ಸೌಲಭ್ಯಗಳು ಸರಳ, ಸುಲಭವಾಗಿ ದೊರಕಿಸುವ ಸದುದ್ದೇಶದಿಂದ ರಾಷ್ಟ್ರೀಯ ಮಟ್ಟದಲ್ಲಿ ಬ್ಯಾಂಕುಗಳ ವಿಲೀನಗೊಳಿಸಲಾಗಿದೆ. ಆದರೆ, ನಾಗರೀಕರಿಗೆ ತ್ವರಿತ ಸೇವೆ ದೊರೆಯುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗೆ ಅದರಲ್ಲೂ ಮಹಿಳೆಯರಿಗೆ ಅನುಷ್ಟಾನಗೊಳಿಸಿರುವ ಯೋಜನೆಯಡಿ ಅರ್ಹರಿಗೆ ಸೌಲಭ್ಯವನ್ನು ಒದಗಿಸುವಂತೆ ಸೂಚಿಸಿದರು.

ಜೀವನ ಜ್ಯೋತಿ ಯೋಜನೆ, ಮುದ್ರಾ ಯೋಜನೆಯಡಿ ಫಲಾನುಭವಿಗಳ ಅರ್ಜಿ ಸಕಾಲದಲ್ಲಿ ವಿಲೇಯಾಗದಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿವೆ. ಕೆಲವು ಬ್ಯಾಂಕುಗಳಲ್ಲಿ ನಿಗಧಿಪಡಿಸಲಾಗಿರುವ ಗುರಿಯಂತೆ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳು ವಿಲೇಯಾಗದೆ ಬಾಕಿ ಉಳಿದಿರುವುದು ಗಮನಕ್ಕೆ ಬಂದಿದೆ. ಅಂತಹ ಬ್ಯಾಂಕುಗಳ ವ್ಯವಸ್ಥಾಪಕರು ಕೂಡಲೇ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಬೇಕು ಎಂದು ಸೂಚಿಸಿದ ಅವರು, ಸಂಘಟಿತ ಪ್ರಯತ್ನಗಳಿಂದ ಸರ್ಕಾರ ನಿಗಧಿಪಡಿಸಿದ ಗುರಿ ತಲುಪಲು, ಯೋಜನೆಯ ವ್ಯವಸ್ಥಿತ ಅನುಷ್ಟಾನ ಸಾಧ್ಯವಾಗಲಿದೆ.

ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ಆಯಾ ಶಾಖಾ ವ್ಯವಸ್ಥಾಪಕರು ಗಮನಹರಿಸಬೇಕು. ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದವರು ಎಚ್ಚರಿಸಿದರು.
ಮಹಿಳೆಯರಿಗಾಗಿಯೇ ರೂಪಿಸಿ ಅನುಷ್ಠಾನಗೊಳಿಸಲಾಗಿರುವ ಸ್ತ್ರೀ ಸಮರ್ಥ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಈವರೆಗೆ ಸುಮಾರು 1200ಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, 350ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಉಳಿದ ಅರ್ಜಿಗಳನ್ನು ಕೂಡಲೇ ಇತ್ಯರ್ಥಪಡಿಸುವಂತೆ ಸಂಸದರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು.

ಜಿಲ್ಲೆಯ ಅನುಪಿನಕಟ್ಟೆಯಲ್ಲಿರುವ ಬ್ಯಾಂಕೊಂದು ಮುಚ್ಚುವ ಸ್ಥಿತಿಯಲ್ಲಿದೆ. ಅದನ್ನು ಮುಚ್ಚದೆ ಉಳಿಸಿಕೊಂಡು ಹೋಗುವ ಬಗ್ಗೆ ಗಮನಹರಿಸುವಂತೆ ಸಾಂಸದರು ಸೂಚಿಸಿದರಲ್ಲದೇ, ಕೃಷಿ ಮತ್ತು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರದಲ್ಲಿ ಆಗಿರಬಹುದಾದ ಪ್ರಗತಿ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಸಂದೀಪ್‌ರಾವ್, ಪ್ರಶಾಂತ್‌ಕುಮಾರ್, ವಿ.ರವಿ, ಯತೀಶ್ ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...