District Police Department ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ, ವಿಶೇಷ ವಾಹನ ಚೆಕ್ ಪೋಸ್ಟ್ ಗಳನ್ನು ಪೊಲೀಸ್ ಇಲಾಖೆ ಆರಂಭಿಸಿದೆ.
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಈ ವೇಳೆ ಜಿಲ್ಲೆಯ ಹಲವು ಕಡೆ ದಾಖಲೆಗಳಿಲ್ಲದೆ ಸಾಗಾಣೆ ಮಾಡುತ್ತಿದ್ದ ವಾಹನದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಪೊಲೀಸ್ ಇಲಾಖೆಗೆ ದೊರೆತಿದೆ.
ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಲಾರಿಯಲ್ಲಿ ಸಾಗಿಸುತ್ತಿದ್ದ 29.70 ಲಕ್ಷ ರೂ. ಮೌಲ್ಯದ1100 ನಾನ್ ಸ್ಟಿಕ್ ದೋಸೆ ತವಾಗಳು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಲಾರಿಯಲ್ಲಿ ಸಾಗಿಸುತ್ತಿದ್ದ 8 ಲಕ್ಷ ರೂ. ಮೌಲ್ಯದ 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳಿದ್ದ 1000 ಬ್ಯಾಗ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂ. ಮೌಲ್ಯದ 10 ಟನ್ ತೂಕದ 404 ಅಕ್ಕಿ ಚೀಲಗಳು.
District Police Department ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸಿಡಲಾಗಿದ್ದ 10 ಲಕ್ಷ ರೂ. ಮೌಲ್ಯದ ಬಟ್ಟೆ, ಸೀರೆ, ಕುಕ್ಕರ್ ಗಳು.
ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿ, 8 ಪ್ರತ್ಯೇಕ ಪ್ರಕರಣ ದಾಖಲಿಸಿ ಸುಮಾರು 25 ಲೀಟರ್ ಮದ್ಯ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.