Friday, September 27, 2024
Friday, September 27, 2024

Raksha University In Shivamogga ರಾಷ್ಡ್ರೀಯ ರಕ್ಷಾ ವಿವಿಯಲ್ಲಿ ಯುವಕರಿಗೆ ಪದವಿ ಮತ್ತು ಸ್ನಾತಕೋತ್ತರ ತರಬೇತಿ ಲಭ್ಯ- ಕೆ.ಎಸ್.ಈಶ್ವರಪ್ಪ

Date:

Raksha University In Shivamogga  ದೇಶದ ಯುವಜನರಲ್ಲಿ ದೇಶಾಭಿಮಾನ, ದೇಶಭಕ್ತಿ ಮತ್ತು ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ಹಾಗೂ ದೇಶದ ಆಂತರಿಕ ಭದ್ರತೆಗೆ ಶಕ್ತಿ ತುಂಬುವಲ್ಲಿ ದೇಶದ 5ನೇ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ ಪ್ರಸಕ್ತ ಸಾಲಿನಿಂದಲೇ ಆರಂಭಗೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಅವರು, ರಾಗಿಗುಡ್ಡದ ಹಳೆಯ ಕೇಂದ್ರೀಯ ವಿದ್ಯಾಲಯದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಆರಂಭಗೊಳ್ಳುತ್ತಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ದೇಶದ ರಕ್ಷಣಾ ಇಲಾಖೆಗೆ ಬಲತುಂಬುವ ನಿಟ್ಟಿನಲ್ಲಿ ಹಾಗೂ ರಾಜ್ಯದ ಯುವಜನಾಂಗಕ್ಕೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಹೆಚ್ಚಿನ ಅನುದಾನವನ್ನು ಖರ್ಚು ಮಾಡುತ್ತಿದೆ ಎಂದವರು ನುಡಿದರು.

ಈ ವಿಶ್ವವಿದ್ಯಾಲಯದ ಆರಂಭದಿಂದಾಗಿ ರಾಜ್ಯದ ಯುವಕರು ವಿಶೇಷ ಮಹತ್ವದ ಪದವಿ ಮತ್ತು ಸ್ನಾತಕೋತ್ತರ ತರಬೇತಿಗಳನ್ನು ಪಡೆಯಲಿದ್ದಾರೆ ಎಂದ ಅವರು, ಹೆಚ್ಚಿನ ಯುವಕರು ರಕ್ಷಣಾ ಘಟಕಗಳಲ್ಲಿ ಉದ್ಯೋಗಾವಕಾಶ ಪಡೆಯಲಿದ್ದಾರೆ ಎಂದವರು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ದೇಶದ ರಕ್ಷಣಾ ವಿಭಾಗಗಳಲ್ಲಿ ಸೇವೆ ಸಲ್ಲಿಸಲಿಚ್ಚಿಸುವ ಯುವಕರಿಗೆ ಇಲ್ಲಿನ ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯುವುದರಿಂದಾಗಿ ಉದ್ಯೋಗಾವಕಾಶಗಳು ಲಭಿಸಲಿವೆ. ಅದಕ್ಕಾಗಿ ಇಂದು ರಾಜ್ಯವು ರಕ್ಷಾ ವಿವಿಯೊಂದಿಗೆ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ ಎಂದ ಅವರು, ದೇಶದ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಗತ್ಯವಿರುವ ಮಾನವ ಸಂಪನ್ಮೂಲಗಳನ್ನು ಒದಗಿಸುವಲ್ಲಿ ಹಾಗೂ ಸಶಕ್ತ ಭಾರತ ನಿರ್ಮಿಸುವಲ್ಲಿ ಈ ವಿಶ್ವವಿದ್ಯಾಲಯ ಸಹಕಾರಿಯಾಗಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರು ಉಲ್ಲೇಖಿಸಿದಂತೆ ಇಲ್ಲಿ ಶಿಕ್ಷಣ ಪಡೆವ ಪ್ರತಿ ವಿದ್ಯಾರ್ಥಿಯೂ ಭಾರತದ ಅನರ್ಘ್ಯ ರತ್ನಗಳಾಗಿ ಹೊರಹೊಮ್ಮಲಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿದೆ. ಎಂದ ಅವರು, ಇಲ್ಲಿನ ಮೂಲಭೂತ ಸೌಕರ್ಯಗಳು, ಸ್ಮಾರ್ಟ್ ಗ್ರಂಥಾಲಯ, ವಿದ್ಯಾರ್ಥಿನಿಲಯ, ಅತ್ಯಾಧುನಿಕ ತರಬೇತಿ ಕೇಂದ್ರಗಳು ಸೇರಿದಂತೆ ಭೌತಿಕ ಸ್ವರೂಪದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 10 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ ಎಂದರು.

Raksha University In Shivamogga  ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 6-8ವರ್ಷಗಳ ಅವಧಿಯಲ್ಲಿ ಹಿಂದೆಂದೂ ಕಂಡಿರದ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಅವುಗಳಲ್ಲಿ ವಿಶೇಷವಾಗಿ ಕೃಷಿ ಮತ್ತು ತೋಟಗಾರಿಕೆ, ಆಯುಷ್, ರಕ್ಷಾ ವಿವಿ ಆರಂಭಗೊಳ್ಳುತ್ತಿರುವುದು ಶೈಕ್ಷಣಿಕ ಕ್ಷೇತ್ರದ ಕ್ರಾಂತಿಯಾಗಿದೆ ಎಂದು ಭಾವಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಷ್ಟ್ರೀಯ ರಕ್ಷಾ ವಿವಿಯ ಉಪಕುಲಪತಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ನಿರ್ದೇಶಕರ ಡಾ. ಆನಂದಕುಮಾರ್ ತ್ರಿಪಾಠಿ ಅವರು ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ತರಬೇತಿಗಳು ಆರಂಭಗೊಳ್ಳಲಿವೆ.

ಪೊಲೀಸ್ ಆಡಳಿತ ಮತ್ತು ಆಂತರಿಕ ಭದ್ರತೆ, ಕೃತಕ ಬುದ್ದಿಮತ್ಯೆ, ಯಂತ್ರಕಲಿಕೆ, ದತ್ತಾಂಶ ವಿಜ್ಞಾನ, ಅಪರಾಧಶಾಸ್ತ್ರ ವರ್ತನೆಯ ವಿಜ್ಞಾನ, ಡಿಜಿಟಲ್ ಫೋರೆನ್ಸಿಕ್, ಪೋರೆನ್ಸಿಕ್ ಸೈಕಾಲಜಿ, ಮಿಲಿಟರಿ ವ್ಯವಹಾರಗಳು- ತಂತ್ರಗಳು ಮತ್ತು ಲಾಜಿಸ್ಟಿಕ್ಸ್, ಭದ್ರತೆ ಮತ್ತು ಅಪರಾಧ, ಕಾನೂನುಗಳು, ಕರಾವಳಿ ಕಡಲ ಮುಂತಾದ ವಿಜ್ಞಾನ ಕ್ಷೇತ್ರಗಳಲಿ ವಿದ್ಯಾರ್ಥಿಗಳಿಗೆ ಬೋದನೆ ನಡೆಯಲಿದೆ.

ವಾಯು ಮತ್ತು ಬಾಹ್ಯಾಕಾಶ ಭದ್ರತೆ, ಅನ್ವಯಿಕ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ವಿದೇಶಾಂಗ ವ್ಯವಹಾರಗಳು, ವಿದೇಶಿ ಬಾಷೆಗಳು, ರಾಜಕೀಯ ಆರ್ಥಿಕತೆ, ಕ್ರೀಡೆ ಮತ್ತು ದೈಹಿಕ ಶಿಕ್ಷಣ ವಿಷಯಗಳಲ್ಲಿ ತರಬೇತಿಗಳು ನಡೆಯಲಿವೆ ಎಂದ ಅವರು, ಇಲ್ಲಿನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಫ್, ಇಂಟರ್ನ್ಶಿಫ್ ಮತ್ತು ಪ್ಲೇಸ್‌ಮೆಂಟ್, ಹಣಕಾಸಿನ ನೆರವು ಒದಗಿಸುತ್ತದೆ. ಅಲ್ಲದೆ ಇಲ್ಲಿ ವಿಶೇಷ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೇಮಕಾತಿಯಲ್ಲಿ ಆದ್ಯತೆ ನೀಡುವಲ್ಲಿ ಕ್ರಮ ವಹಿಸಬೇಕೆಂದವರು ನುಡಿದರು.

ಬೆಂಗಳೂರಿನಲ್ಲಿ ಕೇಂದ್ರ ಗೃಹಸಚಿವ ಅಮಿತ್‌ಶಾ ಅವರು ವರ್ಚುವಲ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹಸಚಿವ ಆರಗಜ್ಞಾನೇಂದ್ರ ಸೇರಿದಂತೆ ಸಂಬಂಧಿತ ಇಲಾಖೆಗಳ ರಾಜ್ಯ ಮಟ್ಟದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಅಂತೆಯೇ ರಾಗಿಗುಡ್ಡದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್, ಮೇಯರ್ ಶಿವಕುಮಾರ್, ಸೂಡಾ ಅಧ್ಯಕ್ಷ ನಾಗರಾಜ್, ರಕ್ಷಾ ವಿವಿಯ ಧರ್ಮೇಂದ್ರಕುಮಾರ್, ವಿ.ಪಿ.ಸಿಂಗ್‌ಶೇಖಾವತ್ ಮತ್ತಿತರರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...