Wednesday, October 2, 2024
Wednesday, October 2, 2024

Rotary Organization ಯುವಜನರಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವ ರೂಪಿಸುವಲ್ಲಿ ರೋಟರಿ ಸಂಸ್ಥೆಯದ್ದು ಮಹತ್ವದ ಪಾತ್ರ

Date:

Rotary Organization ಯುವಜನರಲ್ಲಿ ಸೇವಾ ಮನೋಭಾವನೆ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ರೋಟರಿ ಸಂಸ್ಥೆಯು ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಹೆಚ್ಚು ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸಬೇಕು ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ರೋಟರ‍್ಯಾಕ್ಟ್ ಪ್ರತಿನಿಧಿ, ಮಣಿಪಾಲ್ ಸೆಂಟ್ರಲ್ ರೋಟರ‍್ಯಾಕ್ಟ್ ಕ್ಲಬ್‌ನ ಮಹಾಲಸಾ ಕಿಣಿ ಅಭಿಪ್ರಾಯಪಟ್ಟರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ವತಿಯಿಂದ ನೂತನವಾಗಿ ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ಗ್ರೂಪ್ ರಚನೆ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕವಾಗಿ ಕಾರ್ಯ ಚಟುವಟಿಕೆಗಳು ನಡೆಯುತ್ತವೆ. ಮುಂದಿನ ದಿನಗಳಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ಸಂಸ್ಥೆಯು ಪ್ರಮುಖವಾಗಿ ಸೇವಾ ಮನೋಭಾವ ಮತ್ತು ನಾಯಕತ್ವ ಗುಣ ಬೆಳಸಿಕೊಳ್ಳಲು ಪೂರಕವಾಗುವ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯಮಿಗಳನ್ನು ಒಳಗೊಂಡ ಸಮುದಾಯ ಆಧಾರಿತ

Rotary Organization ಸದಸ್ಯರನ್ನು ಒಳಗೊಂಡಿರುವುದು ವಿಶೇಷತೆ ಆಗಿರುವುದು ಅತ್ಯಂತ ಸಂತೋಷದ ಸಂಗತಿ ಎಂದರು.
ನೂತನ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಪೆಸಿಟ್ ಇಂಜಿನಿಯರಿಂಗ್ ಕಾಲೆಜು ವಿದ್ಯಾರ್ಥಿಗಳಾದ ಆದಿತ್ಯ.ಎಸ್ ಮತ್ತು ಧನ್ವಿ ರಾವ್ ಅಧಿಕಾರ ವಹಿಸಿಕೊಂಡರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಜಗದೀಶ್ ಸರ್ಜಾ ವಹಿಸಿದ್ದರು.
ಜಿಲ್ಲಾ ಮಾಜಿ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಸಹಾಯಕ ಗೌವರ್ನರ್ ಸುನೀತಾ ಶ್ರೀಧರ್, ಕಾರ್ಯದರ್ಶಿ ವೆಂಕಟೇಶ್ ಮತ್ತು ಯುವಜನ ಸೇವಾ ನಿರ್ದೇಶಕ ಬಸವರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...