Saturday, September 28, 2024
Saturday, September 28, 2024

Women’s Day ಮಹಿಳೆಯರು ಸ್ವಾವಲಂಬಿಯಾಗಬೇಕು-ಕೆ.ಆರ್.ಸುಪ್ರಿಯಾ

Date:

Women’s Day ಮಹಿಳಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ರಾಜೇಂದ್ರ ನಗರದ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಕಚೇರಿಯ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಸನ್ಮಾನ ಹಾಗೂ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕನಕ ಮಹಿಳಾ ಸಂಘದ ಕಾರ್ಯದರ್ಶಿ ಶ್ರೀಮತಿ ಚಿತ್ರ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ಶ್ರೀಮತಿ ಸುಮತಿ ಜಿ ಕುಮಾರಸ್ವಾಮಿ ರವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ, ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಂಖ್ಯಿಕ ವಿಭಾಗದ ಸಹಾಯಕ ನಿರ್ದೇಶಕರಾದ ಶ್ರೀಮತಿ ಕೆ. ಆರ್. ಸುಪ್ರಿಯ ರವರು ಮಾತನಾಡಿ ಮಹಿಳೆಯರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಸ್ವಾವಲಂಬಿ ಜೀವನ ನಡೆಸುವ ಅಗತ್ಯವಿದೆ. ಅದಕ್ಕಾಗಿ ಮಹಿಳೆಯರು ಪುರುಷರ ಸಹಕಾರ ಪಡೆದು ಸ್ವ ಉದ್ಯೋಗಗಳಲ್ಲಿ ತೊಡಗುವ ಜತೆಗೆ ಸಮಾಜದಲ್ಲಿ ಸಾಮರಸ್ಯದ ಮೂಲಕ ಸಂಸಾರದಲ್ಲಿ ಸುಖ ಶಾಂತಿ ಕಂಡುಕೊಳ್ಳಬೇಕು ಎಂದು ಕರೆ ನೀಡಿದರು.

ಇದಕ್ಕಾಗಿ ಎಲ್ಲಾ ಮಹಿಳೆಯರು ಶಿಕ್ಷಣ ಹೊಂದುವ ಜತೆಗೆ ಆದುನಿಕ ಜಗತ್ತಿನ ದಿನ ನಿತ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿಯೊಂದು ವಿಷಯವನ್ನು ಎಲ್ಲಾ ಆಯಾಮಗಳಿಂದ ಚರ್ಚಿಸಿ ತನಗೆ ಮತ್ತು ತನ್ನ ಕುಟುಂಬ ಹಾಗೂ ಸಮಾಜಕ್ಕೆ ಒಳಿತಾಗುವಂತಹ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಗಂಗಾ ಯೋಗಾ ಕೇಂದ್ರದ ಹಿರಿಯ ಯೋಗ ಶಿಕ್ಷಕಿ ಶ್ರೀಮತಿ ವಿಜಯಾ ಬಾಯರ್ ರವರು ಮಾತನಾಡಿ ಪ್ರತಿಯೊಬ್ಬ ಮಹಿಳೆಯರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಮತ್ತು ಧ್ಯಾನದಲ್ಲಿ ತೊಡಗಬೇಕು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿ ದಿನ ನಮಗಾಗಿ ಒಂದು ಘಂಟೆ ಸಮಯ ಮೀಸಲು ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.

Women’s Day ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ವಾರ್ತಾಧಿಕಾರಿ ಶ್ರೀ ಬಿ.ಎಸ್. ತಿಮ್ಮೊಲಿ, ಬಾವಸಾರ ಇಂಗುಲಾಂಬಿಕ ಮಹಿಳಾ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ವಾಣಿ ಸತೀಶ ಚಂದ್ರ , ಯೋಗ ಶಿಕ್ಷಕಿ ಶ್ರೀಮತಿ ಪ್ರೇಮಾ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರೇಮ, ಕಾರ್ಯಕಾರಿ ಸದಸ್ಯೆ ಶ್ರೀಮತಿ ಶಕುಂತಲಾ, ಮುಂತಾದವರು ಪಾಲ್ಗೊಂಡಿದ್ದರು.

ಇದೇ ಸಂಧರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಸ್ವೀಪ್ ನ ಸಹಾಯಕ ನೋಡಲ್ ಅಧಿಕಾರಿಗಳಾದ ಶ್ರೀ ನವೀದ್ ಅಹ್ಮದ್ ಫರ್ವೀಜ್ ರವರು ಮಾತನಾಡಿ ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾ ಪ್ರಭುತ್ವದ ಹಬ್ಬ ಎನಿಸಿಕೊಂಡಿರುವ ಸಾರ್ವತ್ರಿಕ ಚುನಾವಣೆ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೇಶ ಸೇವೆಗೆ ಮುಂದಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ನೂರಾರು ಜನರು ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಇದೇ ಸಂಧರ್ಭದಲ್ಲಿ ಮಕ್ಕಳ ಶೈಕ್ಷಣಿಕ ಸರ್ವೇ ಕಾರ್ಯದಲ್ಲಿ ಪಾಲ್ಗೊಂಡ ಸ್ವಯಂ ಸೇವಕರಿಗೆ ಹಾಗೂ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಟೈಲರಿಂಗ್ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಸಂಸ್ಥೆ ವತಿಯಿಂದ ಪ್ರಮಾಣ ಪತ್ರ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಕುಮಾರಿ ಸಿಂಚನ ಮತ್ತು ಕುಮಾರಿ ಸ್ಪಂದನ ರವರು ದೇಶಭಕ್ತಿ ಗೀತೆ ಹಾಡುವ ಜೊತೆಗೆ ಮಹಿಳೆಯರು ಮತ್ತು ವೃದ್ಧರು ಎದುರಿಸುತ್ತಿರುವ ಸಮಸ್ಯೆಗಳ ಕುರಿತ ಕಿರು ನಾಟಕ ಪ್ರದರ್ಶಿಸಿದರು.
ಕುಮಾರಿ ನವ್ಯ ಪ್ರಾರ್ಥಿಸಿದರು.

ಶಿಕ್ಷಕಿ ಶ್ರೀಮತಿ ಉಷಾರಾವ್ ಕಾರ್ಯಕ್ರಮ ನಿರೂಪಿಸಿದರು, ಶ್ರೀಮತಿ ಅನಿತಾ ರವರು ಸ್ವಾಗತಿಸಿ ಶ್ರೀಮತಿ ಶೈಲಜಾ ರವರು ವಂದಿಸಿದರು. ಇದೇ ಸಂಧರ್ಭದಲ್ಲಿ ಬರುವ ಏಪ್ರಿಲ್ ತಿಂಗಳಿನಿಂದ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಹೊಸ ಸ್ವ ಉದ್ಯೋಗದ ತರಬೇತಿಗಳನ್ನು ಪ್ರಾರಂಭಿಸಲು ಮತ್ತು ಮಕ್ಕಳ ಬೇಸಿಗೆ ಶಿಬಿರ ನಡೆಸಲು ಉದ್ದೇಶಿಸಿದ್ದು ಇದಕ್ಕೆ ಆಸಕ್ತರು ತಕ್ಷಣ ಹೆಸರು ನೊಂದಾಯಿಸಿ ಕೊಳ್ಳುವಂತೆ ಮಾಹಿತಿ ಒದಗಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ವಿವಿಧ ಬಡಾವಣೆ ಗಳಿಂದ ಬಂದಿದ್ದ ನೂರಾರು ಜನ ಮಹಿಳೆಯರು ಪಾಲ್ಗೊಂಡು ಕಾರ್ಯಕ್ರಮದ ಪ್ರಯೋಜನ ಪಡೆದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...