News Week
Magazine PRO

Company

Friday, May 2, 2025

Klive Article ಮನಸ್ಸಿನಿಂದ ಮನಸ್ಸಿಗೆ – 21

Date:

Klive Article ಜೀವನೋತ್ಸಾಹ…ಗೆಲ್ಲುವ ಛಲ, ಪಡೆದೇ ತೀರುವೆನೆಂಬ ಹಠ, ಯಶಸ್ಸಿಗಾಗಿ ತಹತಹಿಸುವ ಕಿಚ್ಚು, ಸೋಲನ್ನು ಒಪ್ಪಿಕೊಳ್ಳದ ಮನಸ್ಥಿತಿ, ಏನಾದರೂ – ಹೇಗಾದರೂ ಮಾಡಿ ಅಂದು ಕೊಂಡಿದ್ದನ್ನು ಸಾಧಿಸಲೇ ಬೇಕೆಂಬ ಮನೋಭಾವ, ಧಣಿವರಿಯದ ಹೋರಾಟ ಮುಂತಾದ ಎಲ್ಲಾ ಅರ್ಥಗಳನ್ನು ಆ ಇಂಗ್ಲೀಷ್ ಪದ ಒಳಗೊಂಡಿದೆ.ಹೆಚ್ಚಾಗಿ ಕ್ರೀಡೆಯಲ್ಲಿ ಈ ಪದ ಬಳಸಲ್ಪಟ್ಟರೂ ಬದುಕಿನ ಎಲ್ಲಾ ಕ್ಷೇತ್ರಗಳಿಗೂ ಇದು ಅನ್ವಯಿಸುತ್ತದೆ.

ಸಮಕಾಲೀನ ರಾಜಕೀಯ ಪರಿಸ್ಥಿತಿಗಳಿಗೆ ಇದನ್ನು ಸಮೀಕರಿಸಿ ಸಾಮಾನ್ಯರಾದ ನಾವು ಒಂದಷ್ಟು ಸ್ಪೂರ್ತಿದಾಯಕ ಅಂಶಗಳನ್ನು ಗುರುತಿಸಬಹುದು.ದೇವೇಗೌಡ, ನರೇಂದ್ರ ಮೋದಿ, ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಮಾಯಾವತಿ, ಅಮಿತ್ ಷಾ, ಕುಮಾರ ಸ್ವಾಮಿ, ಜಗನ್ ಮೋಹನ್ ರೆಡ್ಡಿ ಸೇರಿದಂತೆ ಕೆಲವರ ಪಟ್ಟಿ ಇದೆ.ಇವರ ಸಾಮಾನ್ಯ ಅಂಶವೆಂದರೆ, ಸೋಲನ್ನು ಒಪ್ಪಿಕೊಳ್ಳದ, ಗೆಲುವಿಗಾಗಿ ಹಲವು ವರ್ಷಗಳ ಕಾಯುವಿಕೆ ಮತ್ತು ನಿರಂತರ ಶ್ರಮದಾಯಕ ಹೋರಾಟವನ್ನು ಅವರಲ್ಲಿ ನೇರವಾಗಿ ಕಾಣಬಹುದು. ಎಂತಹ ಸೋಲು ಕೂಡ ಅವರನ್ನು ಕುಗ್ಗಿಸುವುದಿಲ್ಲ. ಸೋತ ಕ್ಷಣದಿಂದ ಗೆಲುವಿಗಾಗಿ ಹಪಹಪಿಸತೊಡಗುತ್ತಾರೆ. ಮಾನ ಅವಮಾನ ಅವರಿಗೆ ಲೆಕ್ಕವೇ ಇಲ್ಲ. ಭರವಸೆಗಳ ಮೇಲೆ ಭರವಸೆಗಳನ್ನು ಕೊಡುತ್ತಾ ಅವರ ಹಿಂಬಾಲಕರನ್ನು ಪ್ರೋತ್ಸಾಹಿಸುತ್ತಿರುತ್ತಾರೆ.

ಎಂತಹ ಹೀನಾಯ ಸೋಲೇ ಆಗಲಿ, ಕೊಲೆ ಅತ್ಯಾಚಾರ ಭ್ರಷ್ಟಾಚಾರದ ನಿಕೃಷ್ಟ ಆರೋಪ ಶಿಕ್ಷೆಗಳೇ ಆಗಲಿ, ಜೈಲುವಾಸವೇ ಆಗಿರಲಿ, ಅವರ ಮೇಲಿನ ಹಲ್ಲೆಗಳನ್ನು ಸಹ ಅವರು ನಿರ್ಲಕ್ಷಿಸಿ ಮತ್ತೆ ಮತ್ತೆ ಜನರ ಮಧ್ಯೆ ಬರುತ್ತಾರೆ. ಅದೇ ಉತ್ಸಾಹದಿಂದ ಭಾಷಣ ಮಾಡುತ್ತಾರೆ. ಹೃದಯದ ಎರಡು ಶಸ್ತ್ರಚಿಕಿತ್ಸೆಯ ನಂತರವೂ ಕುಮಾರ ಸ್ವಾಮಿಯವರು ಅಧಿಕಾರಕ್ಕೇರಲು ರಾಜ್ಯ ಸುತ್ತುತ್ತಾರೆ…ಅವರುಗಳು ಮಾಡುವುದು ಸರಿ ಎಂದು ನಾನು ಖಂಡಿತ ಹೇಳುತ್ತಿಲ್ಲ. ಅವರ ವ್ಯಕ್ತಿತ್ವವನ್ನು ಮೆಚ್ಚುತ್ತಿಲ್ಲ.
ಆದರೆ ಅವರಲ್ಲಿರುವ ಜೀವನೋತ್ಸಾಹ ಮಾತ್ರ ‌ಖಂಡಿತ ಪ್ರೇರಣಾದಾಯಕ.ಸಾಮಾನ್ಯ ಜನರನ್ನು ಗಮನಿಸಿ. ಕೇವಲ ಪ್ರೀತಿಗಾಗಿ, ಕೌಟುಂಬಿಕ ಕಲಹಗಳಿಗಾಗಿ, ಸಾಲಕ್ಕಾಗಿ, ಸಣ್ಣ ಪುಟ್ಟ ಅವಮಾನಗಳಿಗಾಗಿ ಜನ ಜೀವನವೇ ಮುಗಿದು ಹೋದಂತೆ ಕುಸಿದು ಬೀಳುತ್ತಾರೆ ಮತ್ತು ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ.ಈ ವ್ಯತ್ಯಾಸ ಏಕೆ. ಎಲ್ಲರೂ ಮನುಷ್ಯರೇ ಅಲ್ಲವೇ. ಈ‌ ಪ್ರಕೃತಿ ಈ ಸಮಾಜ ಈ ಸರ್ಕಾರ ನ್ಯಾಯ ಅನ್ಯಾಯ ನೀತಿ ಅನೀತಿ ಮಾನ ಅವಮಾನ ಕಾನೂನು ಎಲ್ಲವೂ ಎಲ್ಲರಿಗೂ ಒಂದೇ ಅಲ್ಲವೇ.ಸೋಲು ಸಂಕಷ್ಟಗಳನ್ನು ಎದುರಿಸುವುದು ಅವರಿಗೆ ಸಾಧ್ಯವಾಗುವುದಾದರೆ ನಮಗೆ ಏಕೆ ಆಗುವುದಿಲ್ಲ.ಇಲ್ಲಿಯೇ ಭಾರತದ ಸಾಮಾಜಿಕ ಮತ್ತು ಮಾನಸಿಕ ಅಸಮತೋಲನದ ತಾರತಮ್ಯ ಅಡಗಿರುವುದು.

ಭಂಡ ವ್ಯಕ್ತಿಗಳು, ಭಾವನೆಗಳನ್ನು ನಿಯಂತ್ರಿಸುವವರು, ಅಧಿಕಾರ ಹಣದ ಮೋಹಕ್ಕೆ ಒಳಗಾದವರು, ಜನರ ನಾಡಿ ಮಿಡಿತ ಅರ್ಥಮಾಡಿಕೊಂಡವರು, ಯಶಸ್ಸು ಮಾತ್ರವೇ ನಿಜವಾದ ಮಾನ ಮರ್ಯಾದೆ ಎಂದು ಭಾವಿಸಿರುವವರು ಜೀವನವನ್ನು ಹೆಚ್ಚು ಧೈರ್ಯದಿಂದ ಎದುರಿಸುತ್ತಾರೆ.ಅದಕ್ಕೆ ವಿರುದ್ಧವಾಗಿ
ಸೂಕ್ಷ್ಮ ಮನಸ್ಸಿನವರು, ಭಾವನಾ ಜೀವಿಗಳು, ಸಮಾಜದ ಮೌಲ್ಯಗಳನ್ನು ಗೌರವಿಸುವವರು ಮತ್ತು ಅದಕ್ಕೆ ಭಯಪಡುವವರು ಬದುಕು ಎದುರಿಸಲು ತುಂಬಾ ಶ್ರಮ ಪಡುತ್ತಾರೆ ಹಾಗು ಸದಾ ಕಾಲ ಅತೃಪ್ತರಾಗಿಯೇ ಇರುತ್ತಾರೆ. ವಿಫಲತೆಯ ಭಯದಿಂದ ನರಳುತ್ತಾರೆ.

Klive Article ಜೊತೆಗೆ ಈ ರಾಜಕಾರಣಿಗಳಲ್ಲಿ ಬಹುತೇಕರು 65/85 ವಯಸ್ಸಿನ ನಡುವಿನವರು ಹಾಗು ಅದಕ್ಕಿಂತ ಹಿರಿಯರು. ಆದರೂ ಅವರ ಉತ್ಸಾಹ 25 ರ ಯುವಕರನ್ನು ನಾಚುವಂತಿರುತ್ತದೆ. ಚುನಾವಣಾ ಸಮಯದಲ್ಲಿ ಅವರ ಓಡಾಟ ಹಾರಾಟ ಯುದ್ಧದ ಸೈನಿಕರ ‌ದೈಹಿಕ ಶಕ್ತಿಯನ್ನು ನೆನಪಿಸಿತ್ತದೆ. ಆದರೆ ‌ಸಾಮಾನ್ಯ ಜನ 45/55 ಸಮೀಪಿಸುತ್ತಿದ್ದಂತೆ ಜೀವನವೇ ಮುಗಿದು ಹೋದಂತೆ ಭಾವಿಸುತ್ತಾರೆ. ತಮ್ಮ ಚಟುವಟಿಕೆ ನಿಯಂತ್ರಿಸಿಕೊಳ್ಳುತ್ತಾರೆ.

ಇರುವುದು ಒಂದೇ ಜೀವನ. ನಾವು ಯಾವುದೇ ಕ್ಷೇತ್ರದಲ್ಲಿ ಇರಲಿ ಅಥವಾ ‌ಸಾಮಾನ್ಯ ಸರಳ ಜೀವನವೇ ಸಾಗಿಸುತ್ತಿರಲಿ ಒಟ್ಟಿನಲ್ಲಿ ಬದುಕಿನ ಕೊನೆಯವರೆಗೂ ಜೀವನೋತ್ಸಾಹ ಉಳಿಸಿಕೊಳ್ಳೋಣ. ಎಂತಹ ಸೋಲು ಅಥವಾ ಕೆಟ್ಟ ಪರಿಸ್ಥಿತಿಯೇ ಬರಲಿ ಮತ್ತೆ ಮತ್ತೆ ಗೆಲುವಿನ ಭರವಸೆಯೊಂದಿಗೆ ಮುನ್ನಡೆಯೋಣ. ಪ್ರಕೃತಿಯಲ್ಲಿ ಒಂದು ದಿನ ಲೀನವಾಗುವವರೆಗೂ..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ.

ವರದಿ ಕೃಪೆ: ವಿವೇಕಾನಂದ. ಎಚ್.ಕೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News
  • United States+1
  • United Kingdom+44
  • Afghanistan+93
  • Albania+355
  • Algeria+213
  • American Samoa+1
  • Andorra+376
  • Angola+244
  • Anguilla+1
  • Antigua & Barbuda+1
  • Argentina+54
  • Armenia+374
  • Aruba+297
  • Ascension Island+247
  • Australia+61
  • Austria+43
  • Azerbaijan+994
  • Bahamas+1
  • Bahrain+973
  • Bangladesh+880
  • Barbados+1
  • Belarus+375
  • Belgium+32
  • Belize+501
  • Benin+229
  • Bermuda+1
  • Bhutan+975
  • Bolivia+591
  • Bosnia & Herzegovina+387
  • Botswana+267
  • Brazil+55
  • British Indian Ocean Territory+246
  • British Virgin Islands+1
  • Brunei+673
  • Bulgaria+359
  • Burkina Faso+226
  • Burundi+257
  • Cambodia+855
  • Cameroon+237
  • Canada+1
  • Cape Verde+238
  • Caribbean Netherlands+599
  • Cayman Islands+1
  • Central African Republic+236
  • Chad+235
  • Chile+56
  • China+86
  • Christmas Island+61
  • Cocos (Keeling) Islands+61
  • Colombia+57
  • Comoros+269
  • Congo - Brazzaville+242
  • Congo - Kinshasa+243
  • Cook Islands+682
  • Costa Rica+506
  • Croatia+385
  • Cuba+53
  • Curaçao+599
  • Cyprus+357
  • Czech Republic+420
  • Côte d’Ivoire+225
  • Denmark+45
  • Djibouti+253
  • Dominica+1
  • Dominican Republic+1
  • Ecuador+593
  • Egypt+20
  • El Salvador+503
  • Equatorial Guinea+240
  • Eritrea+291
  • Estonia+372
  • Eswatini+268
  • Ethiopia+251
  • Falkland Islands+500
  • Faroe Islands+298
  • Fiji+679
  • Finland+358
  • France+33
  • French Guiana+594
  • French Polynesia+689
  • Gabon+241
  • Gambia+220
  • Georgia+995
  • Germany+49
  • Ghana+233
  • Gibraltar+350
  • Greece+30
  • Greenland+299
  • Grenada+1
  • Guadeloupe+590
  • Guam+1
  • Guatemala+502
  • Guernsey+44
  • Guinea+224
  • Guinea-Bissau+245
  • Guyana+592
  • Haiti+509
  • Honduras+504
  • Hong Kong+852
  • Hungary+36
  • Iceland+354
  • India+91
  • Indonesia+62
  • Iran+98
  • Iraq+964
  • Ireland+353
  • Isle of Man+44
  • Israel+972
  • Italy+39
  • Jamaica+1
  • Japan+81
  • Jersey+44
  • Jordan+962
  • Kazakhstan+7
  • Kenya+254
  • Kiribati+686
  • Kosovo+383
  • Kuwait+965
  • Kyrgyzstan+996
  • Laos+856
  • Latvia+371
  • Lebanon+961
  • Lesotho+266
  • Liberia+231
  • Libya+218
  • Liechtenstein+423
  • Lithuania+370
  • Luxembourg+352
  • Macau+853
  • Madagascar+261
  • Malawi+265
  • Malaysia+60
  • Maldives+960
  • Mali+223
  • Malta+356
  • Marshall Islands+692
  • Martinique+596
  • Mauritania+222
  • Mauritius+230
  • Mayotte+262
  • Mexico+52
  • Micronesia+691
  • Moldova+373
  • Monaco+377
  • Mongolia+976
  • Montenegro+382
  • Montserrat+1
  • Morocco+212
  • Mozambique+258
  • Myanmar (Burma)+95
  • Namibia+264
  • Nauru+674
  • Nepal+977
  • Netherlands+31
  • New Caledonia+687
  • New Zealand+64
  • Nicaragua+505
  • Niger+227
  • Nigeria+234
  • Niue+683
  • Norfolk Island+672
  • North Korea+850
  • North Macedonia+389
  • Northern Mariana Islands+1
  • Norway+47
  • Oman+968
  • Pakistan+92
  • Palau+680
  • Palestine+970
  • Panama+507
  • Papua New Guinea+675
  • Paraguay+595
  • Peru+51
  • Philippines+63
  • Poland+48
  • Portugal+351
  • Puerto Rico+1
  • Qatar+974
  • Romania+40
  • Russia+7
  • Rwanda+250
  • Réunion+262
  • Samoa+685
  • San Marino+378
  • Saudi Arabia+966
  • Senegal+221
  • Serbia+381
  • Seychelles+248
  • Sierra Leone+232
  • Singapore+65
  • Sint Maarten+1
  • Slovakia+421
  • Slovenia+386
  • Solomon Islands+677
  • Somalia+252
  • South Africa+27
  • South Korea+82
  • South Sudan+211
  • Spain+34
  • Sri Lanka+94
  • St Barthélemy+590
  • St Helena+290
  • St Kitts & Nevis+1
  • St Lucia+1
  • St Martin+590
  • St Pierre & Miquelon+508
  • St Vincent & Grenadines+1
  • Sudan+249
  • Suriname+597
  • Svalbard & Jan Mayen+47
  • Sweden+46
  • Switzerland+41
  • Syria+963
  • São Tomé & Príncipe+239
  • Taiwan+886
  • Tajikistan+992
  • Tanzania+255
  • Thailand+66
  • Timor-Leste+670
  • Togo+228
  • Tokelau+690
  • Tonga+676
  • Trinidad & Tobago+1
  • Tunisia+216
  • Turkey+90
  • Turkmenistan+993
  • Turks & Caicos Islands+1
  • Tuvalu+688
  • US Virgin Islands+1
  • Uganda+256
  • Ukraine+380
  • United Arab Emirates+971
  • United Kingdom+44
  • United States+1
  • Uruguay+598
  • Uzbekistan+998
  • Vanuatu+678
  • Vatican City+39
  • Venezuela+58
  • Vietnam+84
  • Wallis & Futuna+681
  • Western Sahara+212
  • Yemen+967
  • Zambia+260
  • Zimbabwe+263
  • Åland Islands+358

Popular

More like this
Related

SSLC Examination Board ಮೇ 2 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

SSLC Examination Board 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳ...

Basava Jayanti ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣ– ಕೇಂದ್ರ ಸಚಿವ ವಿ.ಸೋಮಣ್ಣ

Basava Jayanti ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ...