Thursday, March 19, 2026
Thursday, March 19, 2026

Rotary Club of Shivamogga Midtown: ನಮ್ಮ ಸಂಪಾದನೆಯಲ್ಲಿ ಸ್ವಲ್ಪ ಕಷ್ಟದಲ್ಲಿರುವವರಿಗೆ ನೀಡಬೇಕು- ಎಂ.ಜಿ.ರಾಮಚಂದ್ರಮೂರ್ತಿ

Date:

Rotary Club of Shivamogga Midtown : ದಾನ ಹಾಗೂ ಸೇವೆಯಿಂದ ಸಿಗುವ ತೃಪ್ತಿ ಭಾವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾವು ಅನುಭವಿಸುವ ಶ್ರೇಷ್ಠ ಭಾವನೆ. ನಾವು ಗಳಿಸುವ ಸಂಪಾದನೆಯಲ್ಲಿ ಸ್ವಲ್ಪ ಪ್ರಮಾಣವನ್ನು ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸದ್ವಿನಿಯೋಗ ಮಾಡಬೇಕು ಎಂದು ಜಿಲ್ಲಾ ಮಾಜಿ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಹೇಳಿದರು.

ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ರೋಟರಿ ಮಿಡ್‌ಟೌನ್ ಸದಸ್ಯರು, ರೋಟರಿ ಮಿಡ್‌ಟೌನ್ ಚಾರಿಟಿ ಫೌಂಡೇಷನ್ ಹಾಗೂ ದಾನಿಗಳ ಸಹಕಾರದಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ 100 ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು. ಆರ್ಥಿಕವಾಗಿ ಸೌಲಭ್ಯ ಪಡೆದಿರುವ ಮಹಿಳೆಯರು ಹೊಲಿಗೆ ಯಂತ್ರದ ಸದುಪಯೋಗ ಮಾಡಿಕೊಳ್ಳಬೇಕು. ಆರ್ಥಿಕವಾಗಿ ಶಕ್ತರಾದರೆ ಕುಟುಂಬವು ಸದೃಢವಾಗುತ್ತದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಘಟನೆ ಹೊಂದಿದೆ. ವಿಶ್ವಾದ್ಯಂತ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಸೇವಾ ಕ್ಷೇತ್ರ ಹಾಗೂ ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದೆ. ಮಹಿಳಾ ಸಬಲೀಕರಣಕ್ಕೂ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದರು.ರೋಟರಿ ಜಿಲ್ಲಾ ಯೋಜನೆ ಚೇರ‍್ಮನ್ ಡಿ.ಸುರೇಶ್ ಮಾತನಾಡಿ, ಸೇವೆ ಮಾಡುವುದರಲ್ಲಿ ಸಿಗುವ ಭಾವನೆ ಎಲ್ಲಿಯೂ ಸಿಗುವುದಿಲ್ಲ.ನಾವುಮಾಡುವ ಸೇವೆಯು ನಿಜವಾದ ಫಲಾನುಭವಿಗಳಿಗೆ ತಲುಪಬೇಕು ಎಂದು ಹೇಳಿದರು.

Rotary Club of Shivamogga Midtown:  ರೋಟರಿ ಮಿಡ್‌ಟೌನ್ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್ ಮಾತನಾಡಿ, ರೋಟರಿ ಸಂಸ್ಥೆಯು ಸೇವೆ ಮಾಡಲು ಅವಕಾಶ ಕಲ್ಪಿಸಿದೆ. ನನ್ನ ಅಧ್ಯಕ್ಷರ ಅವಧಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು. ಸಹ ಕಾರ್ಯದರ್ಶಿ ಚಂದ್ರಿಕಾ ಗಿರಿಮಾಜಿ, ಎಚ್‌ಪಿಸಿ ಶಿವಪ್ರಸಾದ್, ಮಿಡ್‌ಟೌನ್ ಕಾರ್ಯಕಾರಿ ಮಂಡಳಿ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...