Diamond Jubilee of CBI ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುವ ದಿಶೆಯಲ್ಲಿ ಈಗ ರಾಜಕೀಯ ಇಚ್ಛಾಶಕ್ತಿಗೇನೂ ಕೊರತೆ ಇಲ್ಲ. ಭ್ರಷ್ಟರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
Diamond Jubilee of CBI ನವದೆಹಲಿಯಲ್ಲಿ ನಡೆದ ಸಿಬಿಐ ನ ವಜ್ರ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು , ಭಾರತದ ಆರ್ಥಿಕ ಶಕ್ತಿ ವೃದ್ಧಿಸುತ್ತಿದೆ. ಇದೇ ಹೊತ್ತಿನಲ್ಲಿ ಇದಕ್ಕೆ ಅಡೆತಡೆಗಳನ್ನು ಸೃಷ್ಟಿಸುವವರು ಹೆಚ್ಚುತ್ತಿದ್ದಾರೆ. ದೇಶದ ಸಾಮಾಜಿಕ ರಚನೆ, ಅದರ ಏಕತೆ ಮತ್ತು ಸಹೋದರತ್ವ ಹಾಗೂ ಅದರ ಆರ್ಥಿಕ ಹಿತಾಸಕ್ತಿ ಮತ್ತು ಸಂಸ್ಥೆಗಳ ಮೇಲಿನ ದಾಳಿಯು ಹೆಚ್ಚುತ್ತಿದೆ. ಭ್ರಷ್ಟಾಚಾರದ ಹಣವನ್ನು ಇದಕ್ಕಾಗಿ ವಿನಯೋಗಿಸಲಾಗುತ್ತಿದೆ. ಭ್ರಷ್ಟಾಚಾರ ಮತ್ತು ಅಪರಾಧದ ಬಹು ರಾಷ್ಟ್ರೀಯ ಸ್ವರೂಪವನ್ನು ಅರಿಯುವ ಹಾಗೂ ಈ ಕುರಿತು ಅಧ್ಯಯನ ಕೈಗೊಳ್ಳುವ ಅಗತ್ಯವಿದೆ ಎಂದು ಸಿಬಿಐ ಅಧಿಕಾರಿಗಳಿಗೆ ತಿಳಿಸಿದರು.
ಭ್ರಷ್ಟಾಚಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಎದುರಾಗಿರುವ ಬಹುದೊಡ್ಡ ತೊಡಕು. ಭಾರತವನ್ನು ಬ್ರಷ್ಟಾಚಾರದಿಂದ ಮುಕ್ತಗೊಳಿಸಬೇಕಿರುವುದು ನ್ಯಾಯಾಂಗ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಯ ಮಹತ್ವದ ಜವಾಬ್ದಾರಿಯಾಗಿದೆ ಎಂದರು .