Monday, February 2, 2026
Monday, February 2, 2026

DC Shivamogga ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ- ಡಾ.ಸೆಲ್ವಮಣಿ

Date:

DC Shivamogga ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.

ಜಿಲ್ಲೆಯಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಪ್ರಕರಣಗಳನ್ನು ದಾಖಲಿಸುವಂತೆ ಸೂಚನೆ ನೀಡಿದರು.

DC Shivamogga ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ ಮಾತನಾಡಿ, ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಂಡು ವಶ ಹೆಚ್ಚಾಗಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...