Tuesday, February 3, 2026
Tuesday, February 3, 2026

DC Ballari ಬಳ್ಳಾರಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ-ಪವನ್ ಕುಮಾರ್ ಮಾಲಪಾಟಿ

Date:

DC Ballari ಸಾರ್ವತ್ರಿಕ ವಿಧಾನಸಭೆ ಚುನಾವಣೆ 2023 ರ ಅಂಗವಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಶನಿವಾರದಂದು ಒಟ್ಟು 2,02,500 ರೂ. ನಗದು ಹಣ ಮತ್ತು 47.25 ಲೀಟರ್ (19,828 ರೂ. ಬೆಲೆಯ) ಮದ್ಯ ವಶಪಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ಶನಿವಾರ, 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೋಕಾ ರಸ್ತೆಯ ಕೆಇಬಿ ಚೆಕ್‍ಪೋಸ್ಟ್ ಬಳಿ ಎಸ್‍ಎಸ್‍ಟಿ ತಂಡವು ತಪಾಸಣೆ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 1,02,500 ರೂ. ನಗದು ಹಣವನ್ನು ವಶಪಡಿಸಿಕೊಂಡಿದೆ.

DC Ballari ಪರಿಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ತಾಳೂರು ರಸ್ತೆಯ ಚೆಕ್‍ಪೋಸ್ಟ್ ಬಳಿ ಎಸ್‍ಎಸ್‍ಟಿ ತಂಡದ ಹೆಚ್ಚುವರಿ ಸಿಬ್ಬಂದಿಯು ಪರಿಶೀಲನೆ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ರೂ.1 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದು, ವಿಚಾರಣೆಗೆ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.

94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಕೆಇಬಿ ಚೆಕ್‍ಪೋಸ್ಟ್ ಬಳಿ ಎಫ್‍ಎಸ್‍ಟಿ ತಂಡವು ವಾಹನ ತಪಾಸಣೆ ವೇಳೆ ಅನುಮತಿ ಇಲ್ಲದೇ ಸಾಗಿಸುತ್ತಿದ್ದ ರಾಜಕೀಯ ಪಕ್ಷದ 3 ಕಟ್ಟು(ಬಂಡಲ್) 1,000 ಕರಪತ್ರಗಳು, 400 ಬಿಡಿ ಕರಪತ್ರಗಳು, ಪಕ್ಷದ ಧ್ವಜ (ಒಟ್ಟು 9,17,000 ರೂ. ಮೌಲ್ಯದ) ವಶಪಡಿಸಿಕೊಂಡು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಿಂದ 18.54 ಲೀಟರ್ ಮದ್ಯ (ರೂ.8,391 ಬೆಲೆ) ಹಾಗೂ ಪೆÇಲೀಸ್ ಇಲಾಖೆಯಿಂದ 28.71 ಲೀಟರ್ (ರೂ.11,437 ಬೆಲೆ) ಮದ್ಯ ಸೇರಿದಂತೆ ಒಟ್ಟು 47.25 ಲೀಟರ್ (ರೂ.19,828 ಮೌಲ್ಯದ) ಮದ್ಯ ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ. ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡ ಕೆಲಸ ನಿರ್ವಹಿಸುತ್ತಿವೆ.

ಚುನಾವಣೆ ಪ್ರಕ್ರಿಯೆಯಲ್ಲಿ ಶನಿವಾರದಂದು ಎಫ್‍ಎಸ್, ಎಸ್‍ಎಸ್‍ಟಿ ಹಾಗೂ ಪೊಲೀಸ್ ಇಲಾಖೆ ತಂಡಗಳು ವಸೂಲಿ ಮಾಡಿದ ಒಟ್ಟು 2,02,500 ರೂ.ಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಚುನಾವಣಾ ಅಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...