Amul milk ಅಮುಲ್ ಮತ್ತು ಕೆಎಂಎಫ್ 2 ತಮ್ಮ ಉತ್ಪನ್ನಗಳನ್ನು ಕ್ವಿಕ್ ಕಾಮರ್ಸ್ ವೇದಿಕೆಗಳಲ್ಲಿ ಮಾರಾಟ ಮಾಡುತ್ತವೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೆಎಂಎಫ್ ವಹಿವಾಟು (ರೂ) 10,000 ಕೋಟಿಗಳಷ್ಟು ಹೆಚ್ಚಾಗಿದೆ.
2022ರಲ್ಲಿ ವಹಿವಾಟು 25,000 ಕೋಟಿ ರೂ. ಇತ್ತು. ಅದರಲ್ಲಿ 20,000 ಕೋಟಿ ರೂ. ಕರ್ನಾಟಕದ ರೈತರಿಗೆ ವಾಪಸ್ ಬಂದಿದೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಮಾರುಕಟ್ಟೆಯಲ್ಲಿ ಹಾಲು ಮತ್ತು ಮೊಸರು ಮಾರಾಟ ಮಾಡುವ ಯೋಜನೆಯನ್ನು ಅಮುಲ್ ಘೋಷಿಸಿದ ನಂತರ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ನಂತರ ಅಮಿತ್ ಮಾಳವಿಯಾ ಈ ಟ್ವೀಟ್‌ಗಳನ್ನು ಮಾಡಿದ್ದಾರೆ.
Amul milk ಗುಜರಾತ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಮಾಲೀಕತ್ವದ ಅಮುಲ್ ಕರ್ನಾಟಕವನ್ನು ಪ್ರವೇಶಿಸುತ್ತಿಲ್ಲ ಮತ್ತು ಅಮುಲ್ ಮತ್ತು ಕೆಎಂಎಫ್ ಎರಡೂ ತಮ್ಮ ಉತ್ಪನ್ನಗಳನ್ನು ಕ್ವಿಕ್ ಕಾಮರ್ಸ್ ವೇದಿಕೆಗಳಲ್ಲಿ ಮಾತ್ರ ಮಾರಾಟ ಮಾಡುತ್ತವೆ. ಕರ್ನಾಟಕವು ಹಾಲನ್ನು ಹೆಚ್ಚಾಗಿ ಉತ್ಪಾದಿಸುವ ರಾಜ್ಯವಾಗಿದೆ. ಹೈನುಗಾರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬ್ರಾಂಡ್ ನಂದಿನಿಗಾಗಿ ಮೊಸಳೆ ಕಣ್ಣೀರು ಸುರಿಸುತ್ತಿರುವ ಕಾಂಗ್ರೆಸ್, ಗೋಹತ್ಯೆ ವಿರೋಧಿ ಮಸೂದೆಯನ್ನು ವಿರೋಧಿಸಿ, ನಮ್ಮ ನಂದಿನಿಗಳ ಹತ್ಯೆಗೆ ಅನುಮೋದನೆ ನೀಡಿದೆ. ಬಿಜೆಪಿ ಯೋಜನೆ ನಂದಿನಿಯನ್ನು ದೊಡ್ಡ ಬ್ರ್ಯಾಂಡ್ ಮಾಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ.