Sunday, August 2, 2026
Sunday, August 2, 2026

Red Cross Shimoga ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿ ಕೂಡಲೇ ವೈದ್ಯರ ಸಲಹೆ ಅನುಸರಿಸಿ- ಡಾ.ಎಸ್.ದಿನೇಶ್

Date:

Red Cross Shimoga ಪ್ರತಿಯೊಬ್ಬರು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ಜಾಗೃತಿ ಹೊಂದುವ ಜತೆಯಲ್ಲಿ ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಏನಾದರೂ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಎಸ್.ದಿನೇಶ್ ಹೇಳಿದರು.

ಶಿವಮೊಗ್ಗ ನಗರದ ರೆಡ್‌ಕ್ರಾಸ್ ಕಚೇರಿ ಆವರಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ 10 ಜನ ಕ್ಷಯ ರೋಗಿಗಳಿಗೆ ಅಗತ್ಯ ಪೌಷ್ಠಿಕಾಂಶದ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಟಿಬಿ ನಿರ್ಮೂಲನಾ ಗುರಿಯಿಂದ ರಾಜ್ಯದ ಎಲ್ಲ ರೆಡ್‌ಕ್ರಾಸ್ ಶಾಖೆಗಳಲ್ಲಿ ಪ್ರತಿ ತಿಂಗಳು ಕ್ಷಯ ರೋಗಿಗಳಿಗೆ ಪೌಷ್ಠಿಕಾಂಶದ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ದಿನೇಶ್ ಮಾತನಾಡಿ, ಕ್ಷಯ ರೋಗಕ್ಕೆ ಭಯ ಪಡುವುದು ಬೇಡ, ಸಕಾಲದಲ್ಲಿ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆದರೆ ಕ್ಷಯ ರೋಗ ಗುಣಪಡಿಸಬಹುದು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಪರೀಕ್ಷೆ ಹಾಗೂ ಉಚಿತ ಔಷಧೋಪಚಾರ, ಟಿಬಿ ರೋಗಿಗಳಿಗೆ ಧನ ಸಹಾಯ ನೀಡಲಾಗುತ್ತದೆ ಎಂದು ಹೇಳಿದರು.

Red Cross Shimoga ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರು ಮಾತನಾಡಿ, ತೂಕ ಕಡಿಮೆ ಆಗುವುದು, ಪದೇ ಪದೇ ಜ್ವರ ಬರುವುದು ಕ್ಷಯ ರೋಗದ ಮುಖ್ಯ ಗುಣ ಲಕ್ಷಣಗಳು. ಕಫ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ತೆಗೆದುಕೊಂಡರೆ ಟಿ.ಬಿ. ಮುಕ್ತರಾಗಬಹುದು. ಎಲ್ಲರ ಸಹಕಾರದಿಂದ ಟಿಬಿ ಮುಕ್ತ ಭಾರತ ನಿರ್ಮಾಣ ಮಾಡಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕರಾದ ಗಿರೀಶ್, ನವೀನ್, ಧರಣೇಂದ್ರ ದಿನಕರ್, ಜಿ.ವಿಜಯ್‌ಕುಮಾರ್, ರೆಡ್‌ಕ್ರಾಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...