Monday, February 2, 2026
Monday, February 2, 2026

Blood Donation  ಜೀವನದ ವಿಶೇಷ ಕ್ಷಣ ರಕ್ತದಾನ ಮಾಡಿದ ಅನುಭವ- ಡಾ.ವಿ.ಎಲ್.ಎಸ್.ಕುಮಾರ್

Date:

Blood Donation  ಜೀವನದ ವಿಶೇಷ ಸಂದರ್ಭಗಳಲ್ಲಿ ರಕ್ತದಾನ ಸೇರಿದಂತೆ ಸಮಾಜಮುಖಿ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್.ಕುಮಾರ್ ಹೇಳಿದರು.

ಜನ್ಮದಿನದ ಪ್ರಯುಕ್ತ ಶಿವಮೊಗ್ಗದ ಭಾರತೀಯ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಮಾಡುವುದರ ಮುಖಾಂತರ ವಿಶೇಷವಾಗಿ ಆಚರಿಸಿಕೊಂಡು ಮಾತನಾಡಿದರು. ಜನ್ಮದಿನದ ಪ್ರಯುಕ್ತ ರಕ್ತದಾನದಂತಹ ಸಾರ್ಥಕ ಕಾರ್ಯ ಮಾಡಿದ್ದೇನೆ. ಪ್ರತಿಯೊಬ್ಬರು ಜನ್ಮದಿನ ಹಾಗೂ ವಿಶೇಷ ಸಂದರ್ಭದಲ್ಲಿ ರಕ್ತದಾನ ಮಾಡಬೇಕು. ಇದರಿಂದ ಕಷ್ಟದಲ್ಲಿ ಇರುವವರಿಗೆ ನೆರವು ನೀಡಿದಂತಾಗುತ್ತದೆ ಎಂದು ತಿಳಿಸಿದರು.

Blood Donation  ರಕ್ತದ ಅವಶ್ಯಕತೆ ನಿರಂತರವಾಗಿ ಬೇಕಾಗುವುದರಿಂದ ಹಾಗೂ ರಕ್ತದ ಕೊರತೆ ಆಗದಂತೆ ನೋಡಿಕೊಳ್ಳಲು ಆರೋಗ್ಯವಂತಯ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತದ ಬೇಡಿಕೆಗೆ ಅವಶ್ಯಕತೆಗೆ ಅನುಗುಣವಾಗಿ ರಕ್ತದಾನ ಶಿಬಿರಗಳು ನಡೆಯಬೇಕು. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ಭಾಗಿಯಾಗಬೇಕು ಎಂದರು.

ಯುವಜನತೆ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನ ಮಾಡಲು ಯಾವುದೇ ಹಿಂಜರಿಕೆ, ಭಯ ಬೇಡ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಒಳ್ಳೆಯದೇ ಆಗುತ್ತದೆ. ರಕ್ತದಾನದಂತಹ ಸಮಾಜಮುಖಿ ಸೇವೆ ಅತ್ಯಂತ ಮುಖ್ಯ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನದಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುತ್ತದೆ. ಹೃದಯಾಘಾತ ಪ್ರಮಾಣ ಕಡಿಮೆ ಆಗುತ್ತದೆ. ಆರೋಗ್ಯ ಸದೃಢವಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷ ಆರ್.ಗಿರೀಶ್ 59ನೇ ಬಾರಿ ರಕ್ತದಾನ ಮಾಡಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕ ಮಂಜುನಾಥ್, ಧರಣೇಂದ್ರ ದಿನಕರ್, ನವೀನ್, ಅಲ್ಲಾಭಕ್ಷಿ ಹಾಗೂ ರೆಡ್‌ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನೇಕರು ರಕ್ತದಾನ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...