Saturday, September 28, 2024
Saturday, September 28, 2024

Legislative Assembly Constituency Elections ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ ಚುನಾವಣಾ ನಾಮಪತ್ರ ಸಲ್ಲಿಕೆ ಮಾಹಿತಿ

Date:

Legislative Assembly Constituency Elections ಮೇ 10ರಂದು ನಡೆಯಲಿರುವ 111-ಶಿವಮೊಗ್ಗ ಗ್ರಾಮಾಂತರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸೂಡಾ ಆಯುಕ್ತ ಕೊಟ್ರೇಶ್ ಹೆಚ್. ಅವರು ಹೇಳಿದರು.

ಅವರು ತಾಲೂಕು ಚುನಾವಣಾ ಕಚೇರಿ ಕಾರ್ಯಾಲಯದಲ್ಲಿ ವಿಧಾನಸಭಾ ಚುನಾವಣಾ ಪೂರ್ವಸಿದ್ಧತೆಗಳ ಕುರಿತು ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. 2023ರ ಜನವರಿ 05ರಂದು ಪ್ರಕಟಗೊಂಡ ಅಂತಿಮ ಕರಡು ಪಟ್ಟಿಯಲ್ಲಿ ಗುರುತಿಸಲಾಗಿರುವಂತೆ 01,03,534 ಪುರುಷರು, 01,04,525 ಮಹಿಳೆಯರು, ಇತರೆ ಮೂರು ಮಂದಿ ಸೇರಿದಂತೆ ಒಟ್ಟು 02,08,062 ಮತದಾರರು ಪ್ರಸಕ್ತ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ ಎಂದ ಅವರು, 2698 ವಿಕಲಚೇತನರನ್ನು ಹಾಗೂ 3301, 80+ ವಯೋಮಿತಿಯ ಮತದಾರರನ್ನು ಗುರುತಿಸಲಾಗಿದೆ ಎಂದರು.

Legislative Assembly Constituency Elections ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ ಹರಿಗೆ, ಮಲವಗೊಪ್ಪ, ಸೂಳೆಬೈಲು, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು(ಭಾಗಶಃ), ಆನವೇರಿ ಮತ್ತು ಕಲ್ಲಿಹಾಳ, ಶಿವಮೊಗ್ಗ ತಾಲೂಕು ವ್ಯಾಪ್ತಿಯ 37 ಮತ್ತು ಭದ್ರಾವತಿ ತಾಲೂಕಿನ 17 ಪಂಚಾಯಿತಿಗಳು ಸೇರಿದಂತೆ ಒಟ್ಟು 54 ಗ್ರಾಮ ಪಂಚಾಯತಿಗಳು ಒಳಗೊಂಡಿವೆ.

ಅಲ್ಲದೇ ಹೊಸದಾಗಿ ರಚನೆಗೊಂಡ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೊಳಪಡಲಿವೆ ಎಂದ ಅವರು, ಶಿವಮೊಗ್ಗ ತಾಲೂಕಿನಲ್ಲಿ 171 ಮತ್ತು ಭದ್ರಾವತಿ ತಾಲೂಕಿನಲ್ಲಿ 76 ಸೇರಿದಂತೆ ಒಟ್ಟು 247 ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

ಅವುಗಳ ಪೈಕಿ 26 ಸೂಕ್ಷ್ಮ ಮತ್ತು 39 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದವರು ತಿಳಿಸಿದ್ದಾರೆ.

ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದ ಏಪ್ರಿಲ್ 20ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 11ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಏಪ್ರಿಲ್ 21 ರಂದು ಉಮೇದುವಾರರು ಸಲ್ಲಿಸಿದ ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುವುದು. ಏಪ್ರಿಲ್ 24 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ನಗರದ ಸಹ್ಯಾದ್ರಿ ಕಲಾ ಪದವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಆಯ್ಕೆ ಬಯಸುವ ಉಮೇದುವಾರರು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಶಿವಮೊಗ್ಗ ತಾಲೂಕು ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ನಿಯಂತ್ರಣ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಟಿ. 05 ತಂಡಗಳನ್ನು ರಚಿಸಲಾಗಿದ್ದು, ಅಂತರ ಜಿಲ್ಲಾ ಗಡಿಯಲ್ಲಿ ಚೆಕ್‌ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಅಲ್ಲದೇ ಎಫ್.ಎಸ್.ಟಿ. 05 ತಂಡ, 08 ವಿಡಿಯೋ ಸರ್ವೇಲೆನ್ಸ್ ತಂಡ, ಮಾದರಿ ನೀತಿ ಸಂಹಿತೆ 01 ತಂಡ, ಲೆಕ್ಕ ಪತ್ರ ವೀಕ್ಷಕರ 01 ತಂಡ ಹಾಗೂ ಅವರಿಗೆ ಸಹಾಯಕರಾಗಿ ಲೆಕ್ಕವೀಕ್ಷಕರ 01 ತಂಡವನ್ನು ರಚಿಸಲಾಗಿದೆ.
25 ಸೆಕ್ಟರ್ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಪ್ರಕರಣಗಳ ಕುರಿತು ಮಾಹಿತಿ ನೀಡಲು ಹಾಗೂ ಸಾರ್ವಜನಿಕರಿಂದ ದೂರುಗಳನ್ನು ಪಡೆಯಲು ದಿನದ 24 ಗಂಟೆಗಳು ಸಕ್ರಿಯವಾಗಿರುವಂತೆ 08182-200508 ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಕರೆ ಮಾಡಿ ದೂರುಗಳನ್ನು ದಾಖಲಿಸಬಹುದಾಗಿದೆ.

ಅಲ್ಲದೇ, ಸಿವಿಜಲ್ ಆ್ಯಪ್ ನಲ್ಲಿಯೂ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಪರಶುರಾಮ ಸತ್ತಿಗೇರಿ, ಸಿ.ಡಿ.ಪಿ.ಒ. ಚಂದ್ರಪ್ಪ, ಅರುಣ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...