Sunday, August 2, 2026
Sunday, August 2, 2026

Kagodu Thimmappa ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಬಿಜೆಪಿಗೆ ಸೇರ್ಪಡೆ?

Date:

Kagodu Thimmappa ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಟಿಕೆಟ್​ ಸಿಗದ ಕಾರಣ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು.

ಆದರೆ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು.

Kagodu Thimmappa ಬೆಂಗಳೂರಿನಲ್ಲಿ ರಾಜನಂದಿನಿ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಹೀಗಾಗಿ ರಾಜನಂದಿನಿ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಅದೀಗ ಖಚಿತವಾಗಿದೆ.

ಮಾಜಿ ಮುಖ್ಯಮಂತ್ರಿ ಬಿ. ಎಸ್​. ಯಡಿಯೂರಪ್ಪ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ರಾಜನಂದಿನಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...