Monday, November 17, 2025
Monday, November 17, 2025

Rotary Club of Shivamogga ಡಾ.ಅಂಬೇಡ್ಕರ್ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ನಾಯಕ- ಎಂ.ಚಂದ್ರಶೇಖರಯ್ಯ

Date:

Rotary Club of Shivamogga ಭಾರತದಲ್ಲಿನ ಬಹುತ್ವವುಳ್ಳ ಸಮಾಜದಲ್ಲಿ ಹೆಚ್ಚಿನವರು ಎಲ್ಲ ಕ್ಷೇತ್ರಗಳಲ್ಲಿ ಅಸಮಾನತೆಯಿಂದ ಬಳಲುತ್ತಿದ್ದರು. ಇಂತಹ ಕಾಲಘಟ್ಟದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಂತ ಶ್ರೇಷ್ಠ ಗ್ರಂಥವನ್ನು ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನ್ ನಾಯಕ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ ಎಂ. ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಂವಿಧಾನ ವ್ಯವಸ್ಥೆಯಿಂದ ಎಲ್ಲರಿಗೂ ಅವಕಾಶ ಸಿಗುತ್ತಿದ್ದು, ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಹೆಚ್ಚಿನ ಅಧ್ಯಯನ ನಡೆಸಬೇಕು. ಅವರ ಕೃತಿಗಳನ್ನು ಯುವಜನತೆ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.

Rotary Club of Shivamogga ಅಂಬೇಡ್ಕರ್ ಅವರು ಶೋಷಿತ ವರ್ಗದ ಧ್ವನಿಯಾಗಿದ್ದರು. ಲಂಡನ್‌ನಲ್ಲಿ ಅಧ್ಯಯನ ನಡೆಸಿದ ಅವರು ನಂತರ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು.

ಸಮಸಮಾಜದ ಕನಸು ಕಂಡಂತಹ ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದರು ಎಂದು ಹೇಳಿದರು.
ಟ್ರಸ್ಟ್ ಉಪಾಧ್ಯಕ್ಷ ಡಾ. ಪರಮೇಶ್ವರ್ ಶಿಗ್ಗಾಂವ್, ಕಾರ್ಯದರ್ಶಿ ರಾಮಚಂದ್ರ, ಖಜಾಂಚಿ ಮತ್ತು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಪ್ರಾಚಾರ್ಯ ಸೂರ್ಯನಾರಾಯಣ, ಮುಖ್ಯ ಶಿಕ್ಷಕಿ ಜಯಶೀಲಬಾಯಿ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ದೈಹಿಕ ಶಿಕ್ಷಕ ಮಹಾಬಲೇಶ್, ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ...

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

Children's Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ...