Sunday, December 14, 2025
Sunday, December 14, 2025

BJP Karnataka ಬಿಜೆಪಿ ತೊರೆದ ಶೆಟ್ಟರ್ ಅವರಿಗೆ ಶಾಸಕ ಈಶ್ವರಪ್ಪನವರಿಂದ ಬಹಿರಂಗ ಪತ್ರ

Date:

BJP Karnataka ಸುಮಾರು 4 ದಶಕಗಳಿಗೂ ಹೆಚ್ಚಿನ ಕಾಲ ತಾವು ನಂಬಿ ತಮ್ಮ ರಾಜಕೀಯ ಜೀವನವನ್ನು ರೂಪಿಸಿಕೊಂಡಿದ್ದ ತತ್ವ ಸಿದ್ಧಾಂತ, ರಾಜಕೀಯ ನಿಲುವನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷದ ಕಡೆ ತಾವು ಮುಖ ಮಾಡಿರುವ ಈ ಬದಲಾದ ಪರಿಸ್ಥಿತಿಯಲ್ಲಿ ನನಗೆ ನಿಮ್ಮ ಪೂಜ್ಯ ತಂದೆಯವರಾದ ದಿ.ಶಿವಪ್ಪ ಶೆಟ್ಟರು ಬಹಳವಾಗಿ ನೆನಪಾಗುತ್ತಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಟ್ಟ ಪ್ರಭಾವದಲ್ಲಿ ತಮ್ಮ ರಾಜಕೀಯ ಜೀವನ ರೂಪಿಸಿಕೊಂಡ ದಿ.ಶಿವಪ್ಪ ಶೆಟ್ಟರು, ಭಾರತೀಯ ಜನತಾ ಪಕ್ಷದ ಮೂಲಕ ನಗರ ಸಭೆಯ ಸದಸ್ಯರಾಗಿ, ಮಹಾಪೌರರಾಗಿ, ಶಾಸಕರಾಗಿ ಎಲ್ಲದಕ್ಕಿಂತ ಮಿಗಿಲಾಗಿ ಪಕ್ಷದ ನಿಷ್ಕಾದಂತ ಕಾರ್ಯಕರ್ತರಾಗಿ ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು.

ಅವರದೇ ಪ್ರಭಾವದಲ್ಲಿ ಬೆಳದ ತಾವು ಸಹ ರಾಷ್ಟ್ರೀಯತೆಯ ವಿಚಾರಧಾರಗಳನ್ನು ಮೈಗೂಡಿಸಿಕೊಂಡವರು. ಕಾಂಗ್ರೆಸ್ ಪಕ್ಷದ ದೇಶ ವಿರೋಧಿ ಧೋರಣೆಗಳನ್ನು ಸದಾ ಖಂಡಿಸುತ್ತಾ ಬಂದವರು.

ಭಾರತೀಯ ಜನತಾ ಪಕ್ಷದ ಮೂಲಕ ಅನೇಕ ಬಾರಿ ಶಾಸಕರಾಗಿ ಚುನಾಯಿತರಾಗಿದ್ದು ಮಾತ್ರವಲ್ಲದೇ ರಾಜ್ಯದ ಮುಖ್ಯಮಂತ್ರಿಯಾಗುವಷ್ಟು ಎತ್ತರಕ್ಕೆ ಬೆಳೆದವರು.

BJP Karnataka ಪ್ರಸಕ್ತ ಸಂದರ್ಭದಲ್ಲಿ ತಾಯಿಯಂತೆ ಕಾಪಾಡಿದ ಪಕ್ಷ ತೆಗೆದುಕೊಂಡ ನಿರ್ಣಯದ ವಿರುದ್ಧ ಅಸಮಾಧಾನಗೊಂಡಿರುವ ತಮ್ಮ ಮನಸ್ಥಿತಿ ನನಗೆ ಅರ್ಥವಾಗುತ್ತದೆ. ಆದರೆ, ಪಕ್ಷವನ್ನು ಬಿಟ್ಟು ನಂಬಿದ ಎಲ್ಲಾ ಆದರ್ಶಗಳನ್ನು ತೊರೆದು ನಮ್ಮ ಪಕ್ಷದ ಚಿಂತನೆಗೆ ವಿರುದ್ಧವಾದ ಕಾಂಗ್ರೆಸ್ ಪಕ್ಷಕ್ಕೆ ತಾವು ಸೇರಲು ಬಯಸಿರುವುದು ಮಾತ್ರ ಅತ್ಯಂತ ದುರದೃಷ್ಟಕರ.

ಮುಂದೆ ಒಂದು ದಿನ ತಾವು ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದ ಸಂದರ್ಭದಲ್ಲಿ ಸದನದಲ್ಲಿ ಗೋ ಹತ್ಯೆ ಪರ – ವಿರೋಧದ ಚರ್ಚೆ ನಡೆದರೆ ತಾವು ಗೋ ಹತ್ಯೆಯನ್ನು ಸಮರ್ಥಿಸಲು ಸಾಧ್ಯವೇ? ಉಗ್ರ PFI ಸಂಘಟನೆ ಕುರಿತಾದ ಪರ-ವಿರೋಧದ ಚರ್ಚೆಯಲ್ಲಿ ಈ ನಿರ್ಬಂಧ ತೆರವು ಮಾಡಲು ತಾವು ಸಮ್ಮತ್ತಿಸಲು ಸಾಧ್ಯವೇ? ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿರೋಧ ವ್ಯಕ್ತ ಪಡಿಸಿದ ಕಾಂಗ್ರೇಸ್‌ ಪಕ್ಷದ ವಿರುದ್ಧ ತಮ್ಮ ಉಗ್ರ ಹೋರಾಟ ನನಗಿನ್ನೂ ಮನಸ್ಸಿನಲ್ಲಿ ಹಸಿರಾಗಿದೆ.

ಈಗ ತಾವು ದೇಹವನ್ನು ಯಾವ ರೀತಿ ಒಪ್ಪಿಕೊಳ್ಳಲು ಸಾಧ್ಯ? ನಾವು ನಂಬಿ ಪ್ರತಿವಾರಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಕುರಿತು ಒಮ್ಮೆ ಯೋಚಿಸಿ ಎಂದು ಕೇವಲ ಈ ಬಾರಿಯ ಚುನಾವಣೆಯಲ್ಲಿ ತಮಗೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲವೆಂಬ ಕಾರಣವನ್ನು ಮುಂದಿಟ್ಟುಕೊಂಡು ಪಕ್ಷ ತೊರೆಯುವ ಮಹತ್ವದ ನಿರ್ಧಾರ ಮಾಡುವ ಮುನ್ನ ಪಕ್ಷ ತಮಗೆ ಈ ಹಿಂದೆ ನೀಡಿದ ಸ್ಥಾನಮಾನಗಳ ಕುರಿತು ಒಮ್ಮೆ ಅವಲೋಕಿಸಬೇಕೆಂದು ಕೋರುತ್ತೇನೆ.

ಯಾವುದೇ ವ್ಯಕ್ತಿ ರಾಜಕೀಯವಾಗಿ ಎತ್ತರಕ್ಕೆ ಬೆಳೆಯಲು ಸಾಧ್ಯವಾದರೆ ಅದು ಆತ ನಂಬಿರುವ ಪಕ್ಷದ ತತ್ವ. ಸಿದ್ಧಾಂತಗಳು ಹಾಗೂ ಪಕ್ಷಕ್ಕಾಗಿ ರಾತ್ರಿ ಹಗಲೆನ್ನದೆ ದುಡಿಯುವ ಕಾರ್ಯಕರ್ತರ ಬೆಂಬಲಿದಿಂದ ಮಾತ್ರ
ಎಂಬುದನ್ನು ತಾವು ಮರೆಯಬಾರದು. ತಮ್ಮ ಈ ಪಕ್ಷ ವಿರೋಧಿ ನಿಲುವಿನಿಂದ ಅನೇಕ ಹಿರಿಯ ನಾಯಕರಿಗೆ
ಪಕ್ಷವನ್ನು ಪ್ರೀತಿಸುವ ಅಸಂಖ್ಯಾತ ಕಾರ್ಯಕರ್ತರ ಮನಸ್ಸಿಗೆ ಅಪಾರವಾದ ನೋವಾಗಿದೆ.

ದುಡುಕಿನ ನಿರ್ಧಾರ ಮಾಡದೇ ಒಮ್ಮೆ ಈ ಕುರಿತು ಸಮಗ್ರವಾಗಿ ಯೋಚಿಸಿ ಕಾಲ ಇನ್ನೂ ಮಿಂಚಿಲ್ಲ.

ಬಿಜೆಪಿಯಲ್ಲಿ ಕೆಲವು ತತ್ವ ಸಿದ್ಧಾಂತಗಳನ್ನು ಇಟ್ಟುಕೊಂಡು ಹೋರಾಡಿದ್ದೀರಿ. ಆದರೆ ಅವೇ ತತ್ವ ಸಿದ್ಧಾಂತಗಳು ಕಾಂಗ್ರೆಸ್ ನಲ್ಲಿ ಇಲ್ಲ ? ಏನು ಮಾಡುತ್ತಿರಾ? ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...