Kuvempu University 18-04-2023ರಂದು ಜಿಲ್ಲಾಧಿಕಾರಿಗಳ ಆವರಣದಲ್ಲಿ ಜಿಲ್ಲೆಯ ಮುಖ್ಯ ಅಧಿಕಾರಿಗಳ ಮತ್ತು ಸಾರ್ವಜನಿಕಕರ ಸಮ್ಮುಖದಲ್ಲಿ ಮತಾದಾರರ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಜಿಲ್ಲಾಡಳತ, ಜಿಲ್ಲಾ ಪಂಚಾಯತ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರಿಯ ಶಿಕ್ಷಣ ಮಹಾವಿದ್ಯಾಲಯ, ಶಿವಮೊಗ್ಗ ಇವರ ಸಹಯೋಗದಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಆರ್, ಇವರು ಉದ್ಘಾಟಿಸಿ ಮಾತನಾಡುತ್ತಾ ನಾವೆಲ್ಲಾ ಕಡ್ಡಾಯವಾಗಿ ಮತದಾನ ಮಾಡೋಣ ಮತ್ತು ಎಲ್ಲ್ಲರೂ ಮತದಾನ ಮಾಡುವ ಹಾಗೆ ಪ್ರೇರೇಪಿಸೋಣ ಎಂದು ತಿಳಿಸಿದರು.
ಚುನಾವಣಾ ದಿನದಂದು ವ್ಯಯಕ್ತಿಕ ಕೆಲಸಗಳಿಗೆ ಕಡಿವಾಣ ಹಾಕಿ, ಪ್ರವಾಸ ಇತ್ಯಾದಿಗಳಿಗೆ ಹೋಗದೆ ನಮ್ಮ ಹಕ್ಕನ್ನು ಚಲಾಯಿಸೋಣ ಎಂದು ತಿಳಿಸಿದರು.
Kuvempu University ಪ್ರೊ. ಬಿ.ಪಿ. ವೀರಭದ್ರಪ್ಪ, ಮಾನ್ಯ ಕುಲಪತಿಗಳು, ಕುವೆಂಪು ವಿಶ್ವವಿದ್ಯಾಲಯ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪಾಶ್ಚಿಮಾತ್ಯ ರಾಷ್ಟçಗಳಲ್ಲಿ ನೂರಕ್ಕೆ ನೂರು ಮತದಾನವಾಗುತ್ತದೆ. ನಮ್ಮಲ್ಲಿಯೂ ಸಹ ಆದೇರೀತಿ ಮತದಾನ ಆಗುವ ಹಾಗೆ ಮಾಡುವಲ್ಲಿ ನಮ್ಮೆಲ್ಲರ ಪ್ರಯತ್ನ ದೊಡ್ಡದು ಎಂದು ತಿಳಿಸಿದರು.
ಶ್ರೀ ಸ್ನೇಹಲ್ ಸುಧಾಕರ್ ಲೋಖಂಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯತ್ ಇವರು ಕಾರ್ಯಕ್ರಮಕ್ಕೆ ಶುಭಕೋರುತ್ತಾ ಮತದಾನದ ಮಹತ್ವ ಕುರಿತು ಎಲ್ಲರಿಗೂ ತಿಳಿಸಲು ಸಲಹೆ ನೀಡಿದರು.
ಡಾ. ನಾಗರಾಜ ಪರಿಸರ, ಕಾರ್ಯಕ್ರಮ ಸಂಯೋಜನಾಧಿಕಾರಿ ಎನ್.ಎಸ್.ಎಸ್. ಕುವೆಂಪು ವಿ.ವಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಗರ ಪ್ರದೇಶಗಳಲ್ಲಿ ಮತದಾನ ಕಡಿಮೆಯಾಗುತ್ತಿದ್ದು, ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವೆಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡೋಣ, ಮತದಾನದ ಮಹತ್ವವನ್ನು ಎಲ್ಲರಿಗೂ ತಿಳಿಸಿ ಯಾವುದೇ ಆಮಿಷಕ್ಕೆ ಒಳಗಾಗದೆ ಹೆಚ್ಚು ಮತದಾನ ಮಾಡುವ ಹಾಗೆ ಜಾಗೃತಿ ಮೂಡಿಸೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಧು ಜಿ. ಹಾಗು ಡಾ. ಚಿದಾನಂದ ಎನ್.ಕೆ. ಹಾಗೂ ಶ್ರೀ ಬಸವರಾಜ್ ಕೆ.ಸಿ, ಶ್ರೀ ನವೀದ್, ಶ್ರೀ ವಿಜಯ್ ಕುಮಾರ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಡಾ.ಪ್ರಕಾಶ್ ಸ್ವಾಗತಿಸಿ ಶ್ರೀ ಶರಣನಾಯಕ್ ವಂದಿಸಿದರು. 250ಕ್ಕೂ ಹೆಚ್ಚು ಎನ್.ಎನ್.ಎಸ್. ಸ್ವಯಂ ಸೇವಕರು ಭಾಗವಹಿಸಿದ್ದರು.