Tuesday, February 3, 2026
Tuesday, February 3, 2026

Assembly Election ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷೇತರರಾಗಿ ವಿವಿಧ ವ್ಯಕ್ತಿಗಳಿಂದ ನಾಮಪತ್ರ ಸಲ್ಲಿಕೆ

Date:

Assembly Election ಚಿಕ್ಕಮಗಳೂರಿನಲ್ಲಿ ಈ ಭಾರಿಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಅಭ್ಯರ್ಥಿಗಳು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.

ಅವರ ವಿವರ ಈ ಕೆಳಗಿನಂತಿದೆ. ಚಿಕ್ಕಮಗಳೂರು ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಲು ಮಾಜಿ ನಗರಸಭಾ ಸದಸ್ಯ ಸಿ.ಕೆ.ಜಗದೀಶ್ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿವಿಕೆಗೆ ಹಾಗೂ ಭ್ರಷ್ಟಮುಕ್ತ ಸಮಾಜ ನಿರ್ಮಾ ಣ ಮಾಡುವ ನಿಟ್ಟಿನಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಜನಸಾಮಾನ್ಯರಿಗೆ ಸಮಾನ ಹಕ್ಕು ದೊರೆಯುವಂತೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೀತಾ ಜಗದೀಶ್, ಮುಖಂಡರಾದ ಯುಕ್ತದೇವಿ, ರಾಮರಾಜು, ರಾಜು ಹಾಜರಿದ್ದರು.

Assembly Election ಚಿಕ್ಕಮಗಳೂರು ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಲು ಕ.ರ.ವೇ. ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ಭಾರೀ ಭ್ರಷ್ಟಚಾರದಲ್ಲಿ ಮುಳುಗಿದ್ದು, ಜನಸಾಮಾ ನ್ಯರ ಸಣ್ಣಪುಟ್ಟ ಕೆಲಸಗಳಿಗೆ ಭಾರೀ ತೊಂದರೆಯಾಗಿದೆ. ಇವೆಲ್ಲವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಮತದಾರರು ಈ ಬಾರಿ ಬೆಂಬಲಿಸಲಿದ್ದಾರೆ ಎಂದು ಆಶಾಭಾವನೆ ವ್ಯಕ್ತಪಡಿ ಸಿದರು.

ಈ ಸಂದರ್ಭದಲ್ಲಿ ಕ.ರ.ವೇ. ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಯುವಘಟಕದ ಅಧ್ಯಕ್ಷ ಭರತ್, ನಾದೀಯಾ, ತಸ್ಮೀಯಾ ಹಾಜರಿದ್ದರು.

ಚಿಕ್ಕಮಗಳೂರು ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸ್ಪರ್ಧಿಸಲು ಜಿಲ್ಲಾ ಅಧ್ಯಕ್ಷ ಶಿವಪ್ರಕಾಶ್ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕನ್ನಡ ನಾಡು, ನುಡಿಯ ರಕ್ಷಣೆ ಹಿನ್ನೆಲೆಯಲ್ಲಿ ಪಕ್ಷವು ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ವಿವಿಧ ಕಚೇರಿಗಳಲ್ಲಿ ಕನ್ನಡ ಭಾಷೆಯ ಅರಿವಿಲ್ಲದವರು ಕೆಲಸ ಮಾಡಲಾ ಗುತ್ತಿದೆ. ಆದ್ದರಿಂದ ವಿವಿಧ ಕಚೇರಿಗಳಲ್ಲಿ ರಾಜ್ಯದ ಯುವಕರಿಗೆ ಹೆಚ್ಚು ಆದ್ಯತೆ ನೀಡುವುದು ಹಾಗೂ ಭ್ರಷ್ಟಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟç ಸಮಿತಿ ಜಿಲ್ಲಾ ಕಾರ್ಯದರ್ಶಿ ರತನ್, ಖಜಾಂಚಿ ವರುಣ್, ಪದಾಧಿಕಾರಿಗಳಾದ ಅಲೆನ್‌ಲೋಬೋ, ನಿತಿನ್ ಹಾಜರಿದ್ದರು.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಲು ಬಿ.ಎಂ.ತಿಮ್ಮಶೆಟ್ಟಿ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾ ಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಂಜನ್‌ಅಜಿತ್‌ಕುಮಾರ್, ನಗರಸಭಾ ಸದಸ್ಯರಾದ ಎ.ಸಿ.ಕುಮಾರ ಗೌಡ, ಗೋಪಿ, ನಿಸಾರ್ ಅಹ್ಮದ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...