Department Of Pre-University Education ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ.
ಈ ಬಾರಿ ದಾಖಲೆಯ ಶೇ.74.67ರಷ್ಟು ಫಲಿತಾಂಶ ಪ್ರಕಟಗೊಂಡಿದೆ. ಎಂದಿನಂತೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾದಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮುನ್ನಡೆ ಪಡೆದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಡಾ.ರಾಮಚಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ರಿತ್ ಸಿಂಗ್ ಅವರು ಪತ್ರಿಕಾಗೋಷ್ಟಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದರು.
Department Of Pre-University Education ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಆಳ್ವಾಸ್ ಕಾಲೇಜಿನ ಅನನ್ಯ ಕೆ.ಎ 600ಕ್ಕೆ 600 ಅಂಕಗಳನ್ನು ಗಳಿಸಿದ್ದಾರೆ.
ಬೆಂಗಳೂರಿನ ಎನ್‍ಎಂಕೆ ಆರ್‍ವಿ ಕಾಲೇಜಿನ ವಿದ್ಯಾರ್ಥಿನಿ ತಬಸಮ್ ಶೇಕ್ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 593 ಅಂಕಗಳನ್ನು ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಕಾಲೇಜಿನ ಗಂಗೋತ್ರಿ ಪಿಯು ಕಾಲೇಜಿನ ಎಸ್.ಎಂ.ಕೌಶಿಕ್ ಅವರು 600 ಅಂಕಗಳಿಗೆ 596 ಅಂಕ ಪಡೆದು ಮೊದಲ ರ್ಯಾಂಕ್ ಗಳಿಸಿದ್ದಾರೆ.
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ, ಉಡುಪಿ 2ನೇ ಸ್ಥಾನ, ಕೊಡುಗು 3ನೇ ಸ್ಥಾನ ಪಡೆದಿದ್ದರೆ, ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ಪರೀಕ್ಷೆಗೆ ಹಾಜರಾದ 7,02,067 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.