Sunday, December 14, 2025
Sunday, December 14, 2025

JCI Shivamogga ಪ್ರಸ್ತುತ ಸಂವಹನ ಕೌಶಲ ಅಗತ್ಯ-ವಸಂತ್ ಹೋಬಳಿದಾರ್

Date:

JCI Shivamogga ಉತ್ತಮ ಸಂವಹನ ಕೌಶಲ್ಯವು ಜೀವನದಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ. ಸಂವಹನ ಸಾಮಾರ್ಥ್ಯ ಉತ್ತಮವಾಗಿದ್ದಲ್ಲಿ ಉನ್ನತ ಸ್ಥಾನಗಳನ್ನು ತಲುಪಬಹುದು. ಸಂವಹನ ಕೌಶಲ್ಯ ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಯೋಜಿಸಿದ್ದ ವಲಯ ಮಟ್ಟದ ಸಂವಹನ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅವಕಾಶಗಳ ಸದ್ಭಳಕೆ ಮಾಡಿಕೊಳ್ಳುವಲ್ಲಿ ಸಂವಹನ ತುಂಬಾ ಮುಖ್ಯವಾಗುತ್ತದೆ. ಜ್ಞಾನವನ್ನು ಪರಿಣಾಮಕಾರಿಯಾಗಿ ಉಪಯೋಗಿಸಲು ಸಹ ನಮ್ಮಲ್ಲಿನ ಸಂವಹನ ಕೌಶಲ್ಯ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

JCI Shivamogga ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಬಿ. ಹಿರೇಮಠ ಮಾತನಾಡಿ, ನಾಯಕತ್ವ ಗುಣ ಸೇರಿದಂತೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗುವ ಜೆಸಿಐ ನಂತಹ ಸಂಸ್ಥೆಗಳಲ್ಲಿ ಯುವಜನತೆ ಹೆಚ್ಚು ತೊಡಗಿಸಿಕೊಳ್ಳಬೇಕು. ನಮ್ಮ ಆಸಕ್ತಿ ಕ್ಷೇತ್ರದಲ್ಲಿ ಯಶಸ್ವಿ ವ್ಯಕ್ತಿಯಾಗಿ ಬೆಳೆಯಲು ಜೆಸಿಐ ತುಂಬಾ ನೆರವಾಗುತ್ತದೆ ಎಂದು ಹೇಳಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಯುವಜನರಿಗೆ ತರಬೇತಿ ನೀಡುವ ವಿಶೇಷ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ತರಬೇತುದಾರರಾದ ಸುಧಾಕರ್, ವಿಜಯಕುಮಾರ್, ವಲಯ ತರಬೇತುದಾರ ಮಂಜುನಾಥ್ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂವಹನ ಕೌಶಲ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು.

ವಲಯ ಅಧ್ಯಕ್ಷ ಅನೂಷ್ ಗೌಡ, ವಲಯ ನಿರ್ದೇಶಕಿ ಶಾರದಾ ಶೇಷಗಿರಿಗೌಡ, ಸಂತೋಷ್, ಜೆಸಿಐ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಡಾ. ಲಲಿತಾ, ಕಾರ್ಯಕ್ರಮ ಸಂಯೋಜಕಿ ವಿದ್ಯಾ ಸುದರ್ಶನ್, ಗೌರೀಶ್, ಪ್ರಮೋದ್ ಶಾಸ್ತ್ರಿ, ವಾಣಿ, ಸುರೇಂದ್ರ ಕೋಟ್ಯಾನ್, ರಾಜ್ಯದ ವಿವಿಧೆಡೆಯ ಶಿಬಿರಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...