Friday, September 27, 2024
Friday, September 27, 2024

Department Of Health and Family Welfare ಶಿವಮೊಗ್ಗ ಜಿಲ್ಲೆಯಲ್ಲಿ ಮಲೇರಿಯ ಶೇ 95 ಕಡಿಮೆ ಆಗಿದೆ- ಡಾ.ಗುಡದಪ್ಪ ಕಸಬಿ

Date:

Department Of Health and Family Welfare ಮಲೇರಿಯಾ ನಿರ್ಮೂಲನೆ ಗುರಿ ತಲುಪಲು ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಅಭಿಪ್ರಾಯಪಟ್ಟರು.

ಶಿವಮೊಗ್ಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಾಪೂಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಬಾಪೂಜಿ ನರ್ಸಿಂಗ್ ಕಾಲೇಜ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಶಿವಮೊಗ್ಗ ಮತ್ತು ನಗರದ ಎಲ್ಲಾ ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಬಾಪೂಜಿ ನರ್ಸಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

Department Of Health and Family Welfare ವರದಿಗಳ ಪ್ರಕಾರ ವಿಶ್ವದಲ್ಲಿ ಪ್ರತಿ ವರ್ಷ 241 ಮಿಲಿಯನ್ ಮಲೇರಿಯಾ ಪ್ರಕರಣಗಳು ವರದಿ ಆಗುತ್ತಿದ್ದು, 6 ಲಕ್ಷ ಮರಣಗಳು ಸಂಭವಿಸುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 10 ವರ್ಷಗಳ ಅಂಕಿ ಆಂಶ ಅವಲೋಕಿಸಿದಾಗ ಮಲೇರಿಯಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಶೇ. 95 ರಷ್ಟು ಕಡಿಮೆ ಆಗಿದೆ. 2025 ರ ವೇಳೆಗೆ ಜಿಲ್ಲೆಯಿಂದ ಮಲೇರಿಯಾ ನಿರ್ಮೂಲನೆ ಮಾಡುವ ಗುರಿಯತ್ತ ಸಾಗುತ್ತಿರುವುದು ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಯವರ ಪರಿಶ್ರಮಕ್ಕೆ ದೊರೆತ ಪ್ರತಿಫಲವಾಗಿದೆ ಎಂದು ತಿಳಿಸಿದರು.

ಸ್ವಯಂರಕ್ಷಣಾ ವಿಧಾನ ಮತ್ತು ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ರೋಗವಾಹಕ ಖಾಯಿಲೆಗಳ ನಿಯಂತ್ರಣದಲ್ಲಿ ಸಹಕರಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್ ಮಾತನಾಡಿ, ನಮ್ಮಲ್ಲಿ ಮಲೇರಿಯಾ ಇಲ್ಲದಿದ್ದರೂ ಉತ್ತರ ಭಾರತದಿಂದ ಜಿಲ್ಲೆಗೆ ಆಗಮಿಸುವ ವಲಸಿಗರ ಬಗ್ಗೆ ನಿಗಾವಹಿಸಿ ತಪ್ಪದೇ ರಕ್ತಲೇಪನ ಪರೀಕ್ಷೆಗೊಳಪಡಿಸುವಂತೆ ಸೂಚಿಸಿದರು.

ರೋಟರಿ ವಲಯ ಸಹಾಯಕ ಗವರ್ನರ್ ಸುನಿತಾ ಶ್ರೀಧರ್ ಮಾತನಾಡಿ, ವಿಶ್ವದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ಸಹಕರಿಸಿದಂತೆ ಮಲೇರಿಯಾ ನಿರ್ಮೂಲನೆಗೂ ಸಹಕರಿಸಲು ರೋಟರಿ ಸದಾ ಸಿದ್ದವಿದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ, ರೋಟರಿ ಶಿವಮೊಗ್ಗ ಅಧ್ಯಕ್ಷ ಎನ್ ವಿ ಭಟ್, ರೋಟರಿ ಶಿವಮೊಗ್ಗ ಉತ್ತರದ ಅಧ್ಯಕ್ಷ ಜಗದೀಶ್ ಸರ್ಜಾ, ರೋಟರಿ ಶಿವಮೊಗ್ಗ ಮಿಡ್ ಟೌನ್ ಅಧ್ಯಕ್ಷೆ ವೀಣಾ ಸುರೇಶ್, ರೋಟರಿ ರಿವರ್ ಸೈಡ್ ಅಧ್ಯಕ್ಷ ದೇವೆಂದ್ರಪ್ಪ ಸಹಕಾರ ನೀಡಿದರು.

ಕಾಲೇಜಿನ ಪ್ರಾಚಾರ್ಯ ಡಾ.ಪಂಕಜ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ. ನಾಗರಾಜ್ ನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ, ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಮಾ ಬೇಗಂ ಫಕ್ರುದ್ಧೀನ್ ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಜಿ.ಬಿ, ಕುಮಾರಸ್ವಾಮಿ, ಮುಸ್ತಾಖ್, ಚಂದ್ರಿಕಾ ಗಿರಿಮಾಜಿ, ಬಸವರಾಜಪ್ಪ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಮೇಲ್ವಿಚಾರಕ ನಾರಾಯಣ್, ಉಮೇಶ್, ಯಜುರ್ವೇದ, ತಿಪ್ಪೆಸ್ವಾಮಿ, ಧೀರೆಂದ್ರ, ಶಶಿಕುಮಾರ್, ಶೇರ್ ಆಲಿಖಾನ್, ಭರತ್, ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ನರ್ಸಿಂಗ್ ಕಾಲೇಜ್ ಪ್ರಾಚಾರ್ಯೆ ಡಾ. ಕವಿತಾ ದೇವರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...