Assembly Election ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಅಭ್ಯರ್ಥಿಗಳು ಯಾವುದೇ ಆಮಿಷವನ್ನು ಒಡ್ಡದಂತೆ ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಲು ಅಧಿಕಾರಿಗಳು ಮುಂದಾ ಗಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ರಾಜ್ಯಾಧ್ಯಕ್ಷೆ ಸರೋಜಾ ಬಸವರಾಜ್ ಆಗ್ರಹಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ, ಹೆಂಡ ಹಾಗೂ ಉಡುಗೊರೆಗಳ ಮಹಾಪೂರವೇ ಹರಿದು ಬರುವ ಸಂಭವವಿರುವುದರಿಂದ ಇವುಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಅಧಿಕಾ ರಿಗಳು ಸಹಕರಿಸಬೇಕು ಎಂದು ಹೇಳಿದ್ದಾರೆ.
Assembly Election ಈಗಾಗಲೇ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ವಿವಿಧ ಗಡಿಭಾಗಳಲ್ಲಿ ಹಣ, ಚಿನ್ನ, ಕುಕ್ಕರ್ ಸೇರಿದಂತೆ ಅಪಾರ ಮೌಲ್ಯದ ವಸ್ತುಗಳು ಲಭ್ಯವಾಗುತ್ತಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಇದರೊಂದಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಮತದಾರರಿಗೆ ಆಮಿಷವೊಡ್ಡಲು ಕೆಲವು ಮಂದಿ ಪ್ರಯತ್ನಿಸುವ ಸಂಭವವಿರುವ ಕಾರಣ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ರಾಜ್ಯದ ಮತದಾರರಿಗೆ ಉತ್ತಮ ಅಭ್ಯರ್ಥಿ ಆಯ್ಕೆಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.