BJP Karnataka ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ ಅವರು ಗೋಂದಿ ಚಟ್ನಹಳ್ಳಿ, ಪಿಳ್ಳಂಗಿರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು.
ಸಾವಿರಾರು ಕಾರ್ಯಕರ್ತರು ವಿವಿಧೆಡೆ ಆಯೋಜಿಸಿದ್ದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಗುರುವಾರ ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗೋಂದಿ ಚಟ್ನಹಳ್ಳಿ ಗ್ರಾಮದಲ್ಲಿ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು.
ಅಭಿವೃದ್ಧಿ ಕಾರ್ಯ ನಿರಂತರವಾಗಿರಲು ಬಿಜೆಪಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಕರ್ನಾಟಕ ಬಿಜೆಪಿ ಬೂತ್ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.
BJP Karnataka ಗೋಂದಿಚಟ್ನಹಳ್ಳಿಯ ಸಭಾಭವನದಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಕಾರ್ಯಕ್ರಮದಲ್ಲಿ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಪಾಲ್ಗೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ರಾಜ್ಯದಲ್ಲಿರುವ ಬೂತ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು ಕಾರ್ಯಕರ್ತರಲ್ಲಿ ಸ್ಫೂರ್ತಿ ಹೆಚ್ಚಿಸಿದೆ. ಬೂತ್‌ಗಳಲ್ಲಿ ಹೆಚ್ಚು ಲೀಡ್ ಪಡೆದುಕೊಳ್ಳುವ ಮೂಲಕ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮೆಚ್ಚಿ ವಿವಿಧ ಸಮುದಾಯದ ನೂರಾರು ಯುವಕರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ನರೇಂದ್ರ ಮೋದಿ ನೇತೃತ್ವದ ಕಾರ್ಯಕ್ರಮದ ನಂತರ ಪ್ರಚಾರ ಕಾರ್ಯ ನಡೆಸಲಾಯಿತು.
ಪಿಳ್ಳಂಗಿರಿ, ಹೊಯಸನಹಳ್ಳಿ, ಜಾವಳ್ಳಿ ಸೇರಿದಂತೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತಯಾಚಿಸಲಾಯಿತು.
ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಶಿವಮೊಗ್ಗ ಜಿಲ್ಲಾ ಚುನಾವಣಾ ಉಸ್ತುವಾರಿ ಕುಲದೀಪ್ ಸಿಂಗ್ ಕುಮಾರ್, ಶಿವಮೊಗ್ಗ ಗ್ರಾಮಾಂತರ ಪ್ರವಾಸಿ ಪ್ರಭಾರಿ ಮುಖೇಶ್ ಸಿಂಗ್ ಕೋಲಿ, ಮೇಘರಾಜ ಹೊಳಲೂರು, ದಿನೇಶ್, ಮತ್ತಿತರರು ಉಪಸ್ಥಿತರಿದ್ದರು.