kuvempu University 28-04-2023ರಂದು ಸಹ್ಯಾದ್ರಿ ಕಾಲೇಜಿನ ರಾಧಾಕೃಷ್ಣ ಸಬಾಂಗಣ ಶಿವಮೊಗ್ಗ ಇಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ರಾಸೇಯೋ ಅಧಿಕಾರಿಗಳ ಮತ್ತು ಪ್ರಾಂಶುಪಾಲರ ಸಭೆಯನ್ನು ಏರ್ಪಡಿಸಲಾಗಿತ್ತು. ಮಾನ್ಯ ಕುಲಪತಿಗಳಾದ ಪ್ರೊ.ಬಿ.ಪಿ.ವೀರಭದ್ರಪ್ಪ ಇವರು ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಎನ್.ಎಸ್.ಎಸ್. ಕಾರ್ಯಕ್ರಮಗಳು ಸಮಾಜಮುಖಿಯಾಗಿದ್ದು, ನಮ್ಮ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕಾರ್ಯಕ್ರಮಗಳು ಅತ್ಯುತ್ತಮವಾಗಿ ಮೂಡಿಬರುತ್ತಿದೆ. ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾನ್ಯತೆ ದೊರೆಯುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರ ವಹಿಸಿದೆ ಇದಕ್ಕೆ ಡಾ ನಾಗರಾಜ್ ಪರಿಸರ ಇವರ ಶ್ರಮ ಮುಖ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಮತ್ತು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರುಗಳಾದ ಡಾ. ಪದ್ಮೇಗೌಡ ಎ ಟಿ, ಡಿ.ವಿ.ಎಸ್. ಸಂಜೆ ಕಾಲೇಜು ಮತ್ತು ಡಾ ಸಂಧ್ಯಾಕಾವೇರಿ, ಕಟೀಲ್ ಆಶೋಕ್ ಪೈ ಸ್ಮಾರಕ ಕಾಲೇಜು, ಶಿವಮೊಗ್ಗ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ನೂತನ ವಿಶೇಷ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸ್ವಯಂ ಸೇವಕರಲ್ಲಿ ಸಾಮಾಜಿಕ ಭದ್ದತೆ, ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಹಾಗು ರಾಸೇಯೋ ಪ್ರಾಮುಖ್ಯತೆಯನ್ನು ತಿಳಿಸಿದರು.
kuvempu University ಡಾ. ರಾಜೇಶ್ವರಿ ಎನ್ ಪ್ರಾಂಶುಪಾಲರು, ಸಹ್ಯಾದ್ರಿ ವಿಜ್ನಾನ ಕಾಲೇಜು, ಶಿವಮೊಗ್ಗ ಇವರು ಅಧ್ಯಕ್ಷತೆ ವಹಿಸಿ ನಮ್ಮ ಕಾಲೇಜಿನ ವರದಿಗಳು ನಾವು ಮಾಡಿರುವ ಕೆಲಸಗಳನ್ನು ತಿಳಿಸುತ್ತವೆ ಎಂದು ತಿಳಿಸಿದರು. ಎಲ್ಲರನ್ನೂ ಸ್ವಾಗತಿಸುತ್ತಾ ಪ್ರಾಸ್ತಾವಿಕ ನುಡಿಗಳನ್ನು ಆಡಿದ ಡಾ. ನಾಗರಾಜ ಪರಿಸರ, ಕಾರ್ಯಕ್ರಮ ಸಂಯೋಜನಾಧಿಕಾರಿಗಳು, ಇವರು ಶಿವಮೊಗ್ಗ ಮತ್ತು ಚಿಕ್ಕಮಳೂರು ಎರಡೂ ಜಿಲ್ಲೆಗಳ ಎನ್.ಎಸ್.ಎಸ್. ಅಧಿಕಾರಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಎನ್.ಎಸ್.ಎಸ್. ಸ್ವಯಂ ಸೇವಕರು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವ ಕಾರ್ಯ ರಾಸೇಯೋ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು..
ರಾಸೇಯೋ ಅಧಿಕಾರಿಗಳಾದ ಡಾ ರೇಷ್ಮಾ ನಿರೂಪಿಸಿ, ಡಾ ಶುಭ ಮರವಂತೆ ಪ್ರಾರ್ಥಿಸಿ, ಡಾ. ಶಿವಮೂರ್ತಿ ಸರ್ವರಿಗೂ ವಂದಿಸಿದರು.