Friday, December 5, 2025
Friday, December 5, 2025

Assembly Election ಮೇ 7 ರಂದು ಪ್ರಧಾನಿ ಮೋದಿ ಪ್ರಚಾರ ಸಭೆಗೆ ಆಯನೂರಿನಲ್ಲಿ ಪೂರ್ವಭಾವಿ ಸಿದ್ಧತೆ

Date:

Assembly Election ಪ್ರಧಾನಿ ನರೇಂದ್ರ ಮೋದಿ ಮೇ 7ರಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.

ಸಮಾವೇಶ ಸ್ಥಳದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಆಗಮಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರ ಹಾಗೂ ಇನ್ನೂ ಮೂರು ಕ್ಷೇತ್ರ ಒಳಗೊಂಡಂತೆ ಹತ್ತು ವಿಧಾನಸಭಾ ಕ್ಷೇತ್ರಗಳ ಮತದಾರರನನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೂರು ಲಕ್ಷಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸುವ ನೀರಿಕ್ಷೆ ಇದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ ತಿಳಿಸಿದರು.

Assembly Election ವೇದಿಕೆ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಮಿನಿ ಹೆಲಿಪ್ಯಾಡ್, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕರಿಗೆ ಆಗಮಿಸುವ ಮಾರ್ಗ ಸೇರಿದಂತೆ ಎಲ್ಲ ರೀತಿಯಲ್ಲಿ ಸಕಲ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗಿದೆ.

ಹಿರಿಯರ ಮಾರ್ಗದರ್ಶನದಲ್ಲಿ ಸಮಾವೇಶ ಆಯೋಜನೆ ಆಗಲಿದೆ ಎಂದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಶನಿವಾರ ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳಲೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೇಲಿನನ ಹನಸವಾಡಿ, ಹೊಳೆಹನಸವಾಡಿ ಬೆಳಲಕಟ್ಟೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ನಡೆಸಿದರು. ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದಲ್ಲಿ ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಕ್ಷೇತ್ರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ಪ್ರಮುಖರು ಸಭೆ ನಡೆಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳಲೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪ್ರಚಾರ ಕಾರ್ಯದಲ್ಲಿ ಗ್ರಾಮಾಂತರ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಅರುಣ್, ಕೇಶವ್, ಷಣ್ಮುಖ, ಸುರೇಶ್, ಜಗದೀಶ್, ಮಂಜುನಾಥ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Previous article
Next article

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...