Friday, November 22, 2024
Friday, November 22, 2024

Bharatiya Janata Party ಬಿಜೆಪಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಸಹಾಯಕ

Date:

Bharatiya Janata Party ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದ ಮೂಲಕ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿ ಆಗಲಿದೆ. ಗ್ರಾಮಾಂತರ ಕ್ಷೇತ್ರದ ಎಲ್ಲ ಪಂಚಾಯಿತಿಗಳಲ್ಲೂ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಸೂಡಿ ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ಹಾರೋಬೆನವಳ್ಳಿ ಸೇರಿದಂತೆ ಹಸೂಡಿ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ. ಅನುದಾನದ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಈ ಬಾರಿಯು ಚುನಾವಣೆಯಲ್ಲಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ತಿಳಿಸಿದರು.

ಗ್ರಾಮಾಂತರ ಕ್ಷೇತ್ರದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ರಸ್ತೆ, ಮೂಲಸೌಕರ್ಯ ಸೇರಿದಂತೆ ಕೋಟಿ ರೂ.ಗೂ ಅಧಿಕ ಅನುದಾನ ಒದಗಿಸುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಅಭಿವೃದ್ಧಿ ಕೆಲಸಗಳನ್ನು ಗಮನಿಸಿರುವ ಮತದಾರರು, ಅಭಿವೃದ್ಧಿಯೇ ನಮಗೆ ಮುಖ್ಯ ಎಂಬುದನ್ನು ಮನಗಂಡಿದ್ದಾರೆ. ಅಭಿವೃದ್ಧಿಪರ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದರು.

Bharatiya Janata Party ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸಹ ಗ್ರಾಮಾಂತರ ಕ್ಷೇತ್ರಕ್ಕೆ ಹೆಚ್ಚಿನ ನೆರವು ಒದಗಿಸಿದ್ದಾರೆ. ಬಿಜೆಪಿ ಸರ್ಕಾರ ಮತ್ತೆ ಆಡಳಿತಕ್ಕೆ ಬಂದರೆ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿ ಪರ್ವ ಮುಂದುವರೆಯಲಿದೆ. ಗ್ರಾಮದ ಶಕ್ತಿ ಬಲಗೊಳ್ಳಲಿದೆ ಎಂದು ಹೇಳಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಸೂಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡಾ, ಹೊಸಮನೆ, ಹೊಳೆಬೆನವಳ್ಳಿ, ತಾಂಡಾಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು.

ನೂರಾರು ಕಾರ್ಯಕರ್ತರು, ಗ್ರಾಮಸ್ಥರು ಆಗಮಿಸಿದ್ದರು.
ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

ಭಾನುವಾರ ಹಸೂಡಿ ಭಾಗದ ಪ್ರಚಾರ ಕಾರ್ಯದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಚನ್ನಬಸಪ್ಪ, ಕಾಂತರಾಜ್, ಮಹೇಶ್ ಸೇರಿದಂತೆ ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...