Thursday, November 21, 2024
Thursday, November 21, 2024

K B Ashoka Nayak ರಾಜ್ಯ ಮತ್ತು ಕೇಂದ್ರದ ಬಿಜೆಪಿ‌ ಸರ್ಕಾರಗಳಿಂದ ಅಭಿವೃದ್ಧಿಕಾರ್ಯಗಳಾಗಿವೆ- ಅಶೋಕ ನಾಯಕ್

Date:

K B Ashoka Nayak ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಬೂತ್‌ಗಳಲ್ಲಿ ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಪ್ರಚಾರ ಕಾರ್ಯ ನಡೆಸಿದರು.

ನೂರಾರು ಕಾರ್ಯಕರ್ತರು ಪ್ರತಿ ಬೂತ್, ಗ್ರಾಮದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.

ಶಾಂತಿಪುರ ಗ್ರಾಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಪುರದಾಳು, ಹನುಮಂತಪುರ, ಮಂಜರಿಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಪ್ರಚಾರ ಕಾರ್ಯದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡು ಬೆಂಬಲ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಹೆಚ್ಚಿನ ಅನುದಾನ ನೀಡಿದ ಪರಿಣಾಮ ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಅಧಿಕ ಪ್ರಮಾಣದಲ್ಲಿ ನಡೆದಿದೆ. 5 ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣ ಆಗಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಬೂತ್‌ಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಬಿಜೆಪಿ ಬೆಂಬಲಿಸುವ ಜತೆಯಲ್ಲಿ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು. ಪುರದಾಳು ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ. ಅನುದಾನದ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಈ ಬಾರಿಯು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಾಂತಿಪುರ, ಪುರದಾಳು, ಮಂಜರಿಕೊಪ್ಪ, ಕಲ್ಕೊಪ್ಪ, ಕೂಡಿ, ಆಡಿನಕೊಟ್ಟಿಗೆ, ದೊಡ್ಡಿಮಟ್ಟಿ, ಶೆಟ್ಟಿಕೆರೆ, ರೇಚಿಕೊಪ್ಪ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು.

K B Ashoka Nayak ನೂರಾರು ಕಾರ್ಯಕರ್ತರು, ಗ್ರಾಮಸ್ಥರು ಆಗಮಿಸಿದ್ದರು.
ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

ಆಯನೂರು ಕುಂಸಿ ಭಾಗದ ಪ್ರಚಾರ ಕಾರ್ಯದಲ್ಲಿ ತಮ್ಮಡಿಹಳ್ಳಿ ನಾಗರಾಜ್, ಜಗದೀಶ್, ಉದಯ್ ಸೇರಿದಂತೆ ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...