Monday, February 2, 2026
Monday, February 2, 2026

Karnataka Assembly Election 2023 ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದಾಗಿ ಅಭಿವೃದ್ಧಿ ವೇಗವಾಗಿ ನಡೆಯುತ್ತಿದೆ

Date:

Karnataka Assembly Election 2023 ಶಿವಮೊಗ್ಗ, ಗ್ರಾಮಾಂತರ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿಯೂ ಅಭಿವೃದ್ಧಿ ಆಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಅತ್ಯಧಿಕ ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಶಾಸಕ, ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿ, ಕ್ಷೇತ್ರವ್ಯಾಪ್ತಿಯಲ್ಲಿ ಪ್ರಚಾರ ನಡೆಸುವಾಗ ಜನರು ಅಪಾರ ಬೆಂಬಲ ಸೂಚಿಸುತ್ತಿದ್ದು, ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಸಹಕಾರಿ ಆಗಲಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಸದೃಢವಾಗಿ ಮುನ್ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ಅವಧಿಯಲ್ಲಿ ಅಭಿವೃದ್ಧಿ ಅತ್ಯಂತ ವೇಗಗತಿಯಲ್ಲಿ ನಡೆದಿದೆ. ರಾಜ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಕೆಲಸ ಆಗಬೇಕು. ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಗೆಲ್ಲಿಸಬೇಕು ಎಂದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಪ್ರಚಾರ ನಡೆಸಿದರು. ಅರದೋಟ್ಲು, ಅರಬಿಳಚಿ ಸೇರಿದಂತೆ ವಿವಿಧ ಬೂತ್‌ಗಳಲ್ಲಿ ಇತರ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ಅರದೋಟ್ಲು, ಅರಬಿಳಚಿ, ಕ್ಯಾಂಪ್, ಕೋಡಿಹೊಸೂರು, ದಾನವಾಡಿ, ಅರಕೆರೆ ಸೇರಿದಂತೆ ವಿವಿಧ ಬೂತ್‌ಗಳಲ್ಲಿ ಮತಯಾಚನೆ ನಡೆಸಿದರು. ನೂರಾರು ಕಾರ್ಯಕರ್ತರು ಪ್ರತಿ ಬೂತ್, ಗ್ರಾಮದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.

ಗ್ರಾಮಾಂತರ ಚುನಾವಣಾ ಕಾರ್ಯಾಲಯದಲ್ಲಿ ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

Karnataka Assembly Election 2023 ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳ ಪ್ರಚಾರ ಕಾರ್ಯದಲ್ಲಿ ಮಂಡಲ ಅಧ್ಯಕ್ಷ ಮಂಜುನಾಥ್ ಕಲ್ಲಜ್ಜನಾಳ್, ಸ್ಥಳೀಯ ಮುಖಂಡರು, ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...