Sunday, December 14, 2025
Sunday, December 14, 2025

Summer Camp for Kids ಕಾಲಹರಣಕ್ಕೆ ಬದಲು ಮಕ್ಕಳಿಗೆ ಬೇಸಿಗೆ ಶಿಬಿರ ಉತ್ತಮ ವೇದಿಕೆ- ಸ್ನೇಹಲ್ ಸುಧಾಕರ್ ಲೋಖಂಡೆ

Date:

Summer Camp for Kids ಮನೆಯಲ್ಲಿ ಮಕ್ಕಳು ಕಾಲಹರಣ ಮಾಡುವ ಬದಲು ಕಲಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಆಸಕ್ತಿ ಹೊಂದಿರುವ ಕಲೆಗಳಲ್ಲಿ ತೊಡಗಿಸಿಕೊಳ್ಳಲು ಬೇಸಿಗೆ ಶಿಬಿರ ಒಂದು ಉತ್ತಮ ವೇದಿಕೆ ಆಗಿರುತ್ತದೆ ಎಂದು ಜಿಲ್ಲಾ ಬಾಲ ಭವನ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ತಿಳಿಸಿದರು.

ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಬೇಸಿಗೆ ಶಿಬಿರ-2023 ಕಾರ್ಯಕ್ರಮವನ್ನು ಮೇ.02ರಂದು ಶಿವಮೊಗ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಶಿಪುರದಲ್ಲಿ ಮಕ್ಕಳಿಗೆ ಆಯೋಜಿಸಲಾಗಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಶಿಬಿರದಲ್ಲಿ ಮಕ್ಕಳಿಗೆ ಉತ್ತಮ, ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಚಿತ್ರಕಲೆ, ಕರಕುಶಲ ಕಲೆ, ಯಕ್ಷಗಾನ, ಕರಾಟೆ, ಸಮೂಹ ನೃತ್ಯ ಮತ್ತು ಸಮೂಹ ಗೀತೆ ಹಾಗೂ ಇತರೆ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಜಿ.ಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಾಲಭವನ ಜಿಲ್ಲಾ ಸಮಿತಿ ವತಿಯಿಂದ ಏರ್ಪಡಿಸಿರುವ ಈ 15 ದಿನಗಳ ಶಿಬಿರದಲ್ಲಿ ಚಿತ್ರಕಲೆ, ಕರಕುಶಲ, ಯಕ್ಷಗಾನ, ಕರಾಟೆ, ಸಂಗೀತ, ನೃತ್ಯ , ಆರೋಗ್ಯ ಶಿಬಿರ, ವ್ಯಕ್ತಿತ್ವ ವಿಕಸನ ಚಟುವಟಿಕೆಗಳು, ಪರಿಸರ ಮಹತ್ವದ ಬಗ್ಗೆ ತಿಳಿಸಿಕೊಡಲಾಗುವುದು. ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಸುರಕ್ಷತೆಗಿರುವ ಕಾಯ್ದೆ ಮತ್ತು ಯೋಜನೆಗಳ ಕುರಿತು ಜಾಗೃತಿ ನೀಡಲಾಗುವುದೆಂದು ತಿಳಿಸಿದರು.

ಈ ಕಾರ್ಯಕ್ರಮವನ್ನು ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರದ ಮಕ್ಕಳು, ಸರ್ಕಾರಿ ಶಾಲಾ ಮಕ್ಕಳು, ಸೌಲಭ್ಯ ವಂಚಿತ ಮಕ್ಕಳು ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದೆ. ಮಕ್ಕಳೊಂದಿಗೆ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

Summer Camp for Kids ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಪರಮೇಶ್ವರಪ್ಪ ಸಿ.ಆರ್, ಜಿಲ್ಲಾ ಬಾಲಭವನ ಸಮಿತಿಯ ಸದಸ್ಯರು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್, ಜಿಲ್ಲಾ ಬಾಲಭವನ ಸಮಿತಿಯ ಸದಸ್ಯರು ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗರಾಜ್.ಟಿ, ಕಾಶಿಪುರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಹಾಲಾ ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸಂತೋಷ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಪ್ಪ ಇವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...