Thursday, March 19, 2026
Thursday, March 19, 2026

JCI Shivammogga Sahyadri Institute ಜ್ಞಾನ ಕೌಶಲ ಮತ್ತು ಸಾಧನಗಳೊಂದಿಗಿನ ತರಬೇತಿ ನಾಯಕತ್ವ ಬೆಳೆಸುತ್ತದೆ- ವಿಲಿಯಂ ಡಿಸೋಜಾ

Date:

JCI Shivammogga Sahyadri Institute ಜೀವನದಲ್ಲಿ ಯಶಸ್ಸು ಸಾಧಿಸಲು ಎಲ್ಲ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸುವ ನಾಯಕತ್ವ ಗುಣ ಅತ್ಯಂತ ಅವಶ್ಯಕ. ಯುವಜನರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಂತರಾಷ್ಟ್ರೀಯ ತರಬೇತುದಾರ ವಿಲಿಯಂ ಡಿಸೋಜಾ ಹೇಳಿದರು.


ಶಿವಮೊಗ್ಗ ನಗರದ ಸೂರ್ಯ ನರ್ಸಿಂಗ್ ಕಾಲೇಜಿನಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿಂದ ಆಯೋಜಿಸಿದ್ದ ನಾಯಕತ್ವ ಗುಣ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸಾಧಕರ ಜೀವನದ ಬಗ್ಗೆ ಅರಿತುಕೊಂಡು ನಾಯಕತ್ವ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ನಾಯಕತ್ವವು ಕೇವಲ ಸ್ಥಾನ ಅಥವಾ ಬಿರುದು ಹಿಡಿದಿಟ್ಟುಕೊಳ್ಳುವುದಲ್ಲ. ಇದು ಸಾಮಾನ್ಯ ಗುರಿಯತ್ತ ಇತರರನ್ನು ಪ್ರೇರೇಪಿಸುವ ಮತ್ತು ಪ್ರಭಾವಿಸುವ ಸಾಮರ್ಥ್ಯ ಆಗಿರುತ್ತದೆ. ಪರಿಣಾಮಕಾರಿ ನಾಯಕರಾಗಲು ಅಗತ್ಯವಾದ ಜ್ಞಾನ, ಕೌಶಲ್ಯ ಮತ್ತು ಸಾಧನಗಳೊಂದಿಗೆ ತರಬೇತಿಯು ನಿಮ್ಮನ್ನು ಸಜ್ಜುಗೊಳಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಉಪಾಧ್ಯಕ್ಷ ಮಂಜುನಾಥ್ ಕದಂ ಮಾತನಾಡಿ, ಜೆಸಿಐ ಅಂತಾರಾಷ್ಟ್ರೀಯ ಸಂಸ್ಥೆಯು ಯುವ ಪೀಳಿಗೆಗೆ ಅನುಕೂಲವಾಗುವ ಆರು ತಿಂಗಳ ತರಬೇತಿಯನ್ನು ಒಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಒಂದು ವಿಷಯದಂತೆ ಹಮ್ಮಿಕೊಂಡಿದ್ದು, ಯುವಜನರಿಗೆ ತರಬೇತಿ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

JCI Shivammogga Sahyadri Institute ನಾಯಕತ್ವ ಗುಣಗಳ ಬಗ್ಗೆ ವಿಲಿಯಂ ಡಿಸೋಜಾ ತರಬೇತಿ ನೀಡುತ್ತಿದ್ದು, ಅವರು ಅಂತರಾಷ್ಟ್ರೀಯ ತರಬೇತುದಾರರಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುತ್ತಾರೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಂಡು ತಮ್ಮದೇ ಆದ ಕ್ಷೇತ್ರದಲ್ಲಿ ನಾಯಕತ್ವ ಗುಣಗಳೊಂದಿಗೆ ಬೆಳೆಯಬೇಕು. ಜೀವನದಲ್ಲಿ ಯಶಸ್ಸು ಖಂಡಿತ ಎಂದು ತಿಳಿಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್ ಮಾತನಾಡಿ, ಜೆಸಿಐ ಸಂಸ್ಥೆಯು ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತುಂಬಾ ಶ್ಲಾಘನೀಯ. ಇದೇ ತರಬೇತಿಯನ್ನು ಖಾಸಗಿಯಾಗಿ ಪಡೆಯುವುದು ತುಂಬಾ ವೆಚ್ಚ. ಜೆಸಿಐ ಸಂಸ್ಥೆಯು ಉಚಿತವಾಗಿ ಆರು ತಿಂಗಳ ಕಾಲ ತಿಂಗಳಿಗೆ ಒಂದು ವಿಷಯದಂತೆ ಕಾರ್ಯಗಾರವನ್ನು ಮಾಡುತ್ತಿರುವುದು ತುಂಬಾ ವಿದ್ಯಾರ್ಥಿಗಳಿಗೆ ಅನುಕೂಲವಾಗಿರುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯೆ ಶ್ರೀಜಾ ಅವರು ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡು ಯಶಸ್ವಿಯಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜೆಸಿಐ ವಲಯ 24ರ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...