Thursday, June 18, 2026
Thursday, June 18, 2026

Nethra Educational Charitable Trust ಜೆಸಿಐ ಸಂಸ್ಥೆಯಿಂದ ಧನ್ ಶೀರ್ಷಿಕೆಯಡಿ ಆಹಾರದ ಕಿಟ್ ವಿತರಣೆ

Date:

Nethra Educational Charitable Trust ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಅನಾಥರು ಇರುವ ಸಂಸ್ಥೆಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು.

ಜೆಸಿಐ ಸಂಸ್ಥೆಯು ಧನ್ ಎಂಬ ಶೀರ್ಷಿಕೆಯಡಿ ರೂಪಿಸಿರುವ ಯೋಜನೆಯಡಿ ಯಾರು ಕೂಡ ಹಸಿವಿನಿಂದ ಇರಬಾರದು ಎಂಬ ಕಾಳಜಿಯಿಂದ ಕಾರ್ಯಕ್ರಮವನ್ನು ಪ್ರತಿ ತಿಂಗಳು ಮಾಡಿಕೊಂಡು ಬರಲಾಗುತ್ತಿದೆ.

Nethra Educational Charitable Trust ಅನಾಥಾಶ್ರಮವೊಂದು ಮುಚ್ಚಿಹೋದ ಹಿನ್ನೆಲೆಯಲ್ಲಿ ಹೊಸದಾಗಿ ಟ್ರಸ್ಟ್ ರಚನೆಯಾಗಿದೆ. ಹೆಣ್ಣು ಮಕ್ಕಳಿಗಾಗಿ ಮಾಡಿರುವ ಟ್ರಸ್ಟ್ನಲ್ಲಿರುವವರಿಗೆ ಆಹಾರದ ಕಿಟ್ ವಿತರಿಸಲಾಯಿತು.

ನಮ್ಮ ಜೆಸಿಐ ಶಿವಮೊಗ್ಗ ಭಾವನಾ ಘಟಕವು ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ನಲ್ಲಿ ಇರುವವರಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದು, ನಮ್ಮ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನಿಲ್ ತಿಳಿಸಿದರು.

ಸಭೆಯಲ್ಲಿ ಜೆಸಿಐ ನಿರ್ದೇಶಕಿ ಶಾರದಾ ಶೇಷಗಿರಿ ಗೌಡ, ಉಪಾಧ್ಯಕ್ಷೆ ಕರಿಬಸಮ್ಮ, ಸದಸ್ಯೆ ಸ್ಮಿತಾ, ಜೆಸಿಐ ಶಿವಮೊಗ್ಗ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...