Sunday, August 2, 2026
Sunday, August 2, 2026

BJP Karnataka ಕುಂಸಿ ಮತ್ತು ಹೊಳಲೂರಿನಲ್ಲಿ ಬಿಜೆಪಿ ರೋಡ್ ಶೋ

Date:

BJP Karnataka ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಸಿ ಹಾಗೂ ಹೊಳಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಭರ್ಜರಿ ರೋಡ್ ಶೋ ನಡೆಸಿದರು. ಚುನಾವಣಾ ಪ್ರಚಾರ, ರೋಡ್ ಶೋ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ರೋಡ್ ಶೋ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ನಮ್ಮೆಲ್ಲರ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಸದೃಢ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಆಡಳಿತ ಇದ್ದ ಕಾರಣ ಡಬಲ್ ಇಂಜಿನ್ ಸರ್ಕಾರದ ನೆರವಿನಿಂದ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಮುನ್ನಡೆದಿದೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕು ಎಂದು ಹೇಳಿದರು.

BJP Karnataka ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಮೂರನೇ ಬಾರಿ ಆಗಮಿಸುತ್ತಿರುವುದು ಅತ್ಯಂತ ಸಂತೋಷದ ವಿಚಾರ. ಲಕ್ಷಾಂತರ ಮತದಾರರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಮಾಡಲು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಆಯನೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಜಿಲ್ಲೆ ಹಾಗೂ ಕ್ಷೇತ್ರದ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಹಾಗೂ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ಗ್ರಾಮಾಂತರ ಕ್ಷೇತ್ರದಲ್ಲಿ ಆಗಿವೆ. ಐದು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಕೆ.ಬಿ.ಅಶೋಕ ನಾಯ್ಕ್ ಹೇಳಿದರು.

ರೋಡ್ ಶೋನಲ್ಲಿ ಗ್ರಾಮಾಂತರ ಕ್ಷೇತ್ರದ ಸಾವಿರಾರು ಜನರು ಪಾಲ್ಗೊಂಡಿದ್ದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಸ್ವರೂಪ್, ಜಗದೀಶ್, ತಮ್ಮಡಿಹಳ್ಳಿ ನಾಗರಾಜ್, ಪದ್ಮಿನಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...