Wednesday, August 12, 2026
Wednesday, August 12, 2026

Child Labour ಶಿವಮೊಗ್ಗದಲ್ಲಿ ಬಾಲಕಾರ್ಮಿಕರ ಪತ್ತೆ

Date:

Child Labour ಶಿವಮೊಗ್ಗ ನಗರದ ದುರ್ಗಿಗುಡಿ, ಪಾರ್ಕ್ ಬಡಾವಣೆ, ಜೈಲ್ ಸರ್ಕಲ್‍ಗಳಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಮೇ 03 ರಂದು ತಪಾಸಣೆಯನ್ನು ಕೈಗೊಳ್ಳಲಾಗಿತ್ತು.

01 ಬಾಲಕಾರ್ಮಿಕ ಹಾಗೂ 02 ಕಿಶೋರರು ಕಂಡು ಬಂದಿದ್ದಾರೆ.

ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಉಲ್ಲಂಘನೆ ಕುರಿತು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.

Child Labour ಸದರಿ ಬಾಲಕರನ್ನು ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಹಾಜರುಪಡಿಸಲಾಗಿದೆ. ತಪಾಸಣೆಯಲ್ಲಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.

ತಪಾಸಣೆಯಲ್ಲಿ ಕಾರ್ಮಿಕ ಅಧಿಕಾರಿ ಸುಮ ಹೆಚ್.ಎಸ್, 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಭೀಮೇಶ್ ಪಿ, ಯೋಜನಾ ನಿರ್ದೇಶಕ ರಘುನಾಥ ಎ.ಎಸ್ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಪ್ರಮೋದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...