Saturday, September 28, 2024
Saturday, September 28, 2024

Shivamogga DC Selvamaniಜಿಲ್ಲೆಯಲ್ಲಿ ಮೇ 13 ಬೆಳಿಗ್ಗೆ 6 ರಿಂದ 14 ಬೆಳಿಗ್ಗೆ 6 ವರೆಗೆ ನಿಷೇಧಾಜ್ಞೆ ಜಾರಿ- ಡಾ.ಸೆಲ್ವಮಣಿ

Date:

Shivamogga DC Selvamani ಶಿವಮೊಗ್ಗ, ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2023 ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ. ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಮೇ-13 ರ ಬೆಳಗ್ಗೆ 6 ರಿಂದ ಮೇ-14 ರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ.

ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.

ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ.

ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Shivamogga DC Selvamani ಈ ನಿಷೇಧಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...