Election Advertisement ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ 7 ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು.
ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಮಟ್ಟದ ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.
Election Advertisement ಪೂರ್ವಾನುಮತಿಗೆ ಅರ್ಜಿ ಲಭ್ಯ:
ಮೇ 09 ಹಾಗೂ 10 ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿ ನಮೂನೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ, ಸರ್ ಎಂ.ವಿ. ರಸ್ತೆ, ಶಿವಮೊಗ್ಗ ಈ ಕಚೇರಿಯಿಂದ ಪಡೆಯಬಹುದು.