Saturday, December 6, 2025
Saturday, December 6, 2025

Thirthahalli Assembly Election ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ದಿಗ್ಗಜರ ಬಿರುಸಿನ ಚುನಾವಣಾ ಪ್ರಚಾರ

Date:

Thirthahalli Assembly Election ವಿಧಾನಸಭಾ ಚುನಾವಣೆ ಸನಿಹದಲ್ಲಿಯೇ ಇದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಬಹಳ ಬಿರುಸಿನಿಂದಲೇ ಸಾಗುತ್ತಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳಾದ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕಿಮ್ಮನೆ ರತ್ನಾಕರ್ ಅವರು ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ, ಆರಗ, ಅರಳಸುರಳಿ ಹೀಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್ ಅವರು, ಬಿಜೆಪಿ ಆಡಳಿತದಲ್ಲಿ ಆಗಿರುವ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವಂತಹ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ನೀಡಿದೆ ಎಂದರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಆರಗಜ್ಞಾನೇಂದ್ರ ಅವರು ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ, ಬಿದರಗೋಡು, ಹೆಗ್ಗೋಡು ಹೀಗೆ ವಿವಿಧ ಕಡೆ ಮತಯಾಚನೆ ಸಭೆಗಳನ್ನು ನಡೆಸಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಶಕ್ತಿಮೀರಿ ಕೆಲಸ ಮಾಡಿದ್ದೇವೆ. ನಿರೀಕ್ಷೆಗೂ ಮೀರಿದ ಕಾಮಗಾರಿಗಳನ್ನು ಮಂಜೂರಾಗಿ ಅನುಷ್ಠಾನ ಆಗಿವೆ. ಇನ್ನಷ್ಟು ಅಭಿವೃದ್ಧಿಗಳ ಕೆಲಸ ಮಾಡಬೇಕಿದೆ ಎಂದರು.

Thirthahalli Assembly Election ಚುನಾವಣೆ ಹತ್ತಿರದಲ್ಲಿ ಇರುವಾಗ, ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ವಿಧಾನ ಸಭಾ ಚುನಾವಣೆಗೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಚುನಾವಣಾ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ಕಣದಲ್ಲಿರುವವರಲ್ಲಿ ಯಾರು ಉತ್ತಮರು ಎಂದು ಜನರು ಆಯ್ಕೆ ಮೇಲೆ ನಿರ್ಧಾರವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...