Assembly Election ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ ಫಲಿತಾಂಶವು ನಿರ್ಣಾಯಕವಾಗಿ ತಮ್ಮ ಪಕ್ಷದ ಪರವಾಗಿರಲಿದೆ ಮತ್ತು ಯಾವುದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಮತ್ತು ಚುನಾವಣೋತ್ತರ ಮೈತ್ರಿಗೆ ಅವಕಾಶ ಇಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ.
ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ.
Assembly Election ಜನರು ತಿಳುವಳಿಕೆಯುಳ್ಳವರು ಮತ್ತು ವಿದ್ಯಾವಂತರು ಮತ್ತು ರಾಜ್ಯದ ಹಿತಾಸಕ್ತಿಗಳನ್ನು ಪರಿಗಣಿಸಿ ಮತ ಚಲಾಯಿಸಿದ್ದಾರೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ವಿಫಲವಾಗಿದೆ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ವಿಧಾನಸಭೆಯ ಸುಳಿವು ನೀಡಿವೆ.