Aam Admi Party ದೆಹಲಿಯ ಮೇಲಿನ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರದ ನಡುವೆ ಸದಾ ನಡೆಯುತ್ತಿದ್ದ ತಿಕ್ಕಾಟಕ್ಕೆ ಸುಪ್ರೀಂಕೋರ್ಟ್ ಕೊನೆಗೂ ಇತಿಶ್ರೀ ಹಾಡಿದೆ.
ಕಾನೂನು ಸುವ್ಯವಸ್ಥೆ, ಪೊಲೀಸ್ ಹಾಗೂ ಭೂಮಿಗೆ ಸಂಬಂಧಿಸಿದ ಅಧಿಕಾರ ದೆಹಲಿ ಸರ್ಕಾರಕ್ಕಿಲ್ಲ ಎಂದೂ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ತನ್ನ ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯಲ್ಲಿನ ಸೇವೆಗಳಿಗೆ ಸಂಬಂಧಿಸಿದ ಆಡಳಿತದಲ್ಲಿ ದೆಹಲಿ ಸರ್ಕಾರಕ್ಕೇ ಅಧಿಕಾರವಿದೆ ಎಂದು ತೀರ್ಪು ನೀಡಿದೆ.
Aam Admi Party ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್ ಮೋರ್( Ashis more) ಅವರನ್ನು ವರ್ಗ ಮಾಡಿರುವ ಆಪ್ ಸರ್ಕಾರ, ಅವರ ಸ್ಥಾನಕ್ಕೆ ಜಲಮಂಡಳಿಯ ಮಾಜಿ ಸಿಇಒ ಎ.ಕೆ.ಸಿಂಗ್ (A.K. Singh) ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ತೀರ್ಪನ್ನು ಸ್ವಾಗತಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ‘ಇದು ಪ್ರಜಾಪ್ರಭುತ್ವದ ಗೆಲುವು. ದೆಹಲಿಯ ಜನರಿಗೆ ನ್ಯಾಯ ಒದಗಿಸಿದ್ದಕ್ಕೆ ಸುಪ್ರೀಂಕೋರ್ಟ್‌ಗೆ ಹೃದಯಪೂರ್ವಕ ಧನ್ಯವಾದಗಳು. ಇದರಿಂದ ದೆಹಲಿಯ ಅಭಿವೃದ್ಧಿ ಚಟುವಟಿಕೆಗಳು ಹಲವು ಪಟ್ಟು ಹೆಚ್ಚಿನ ವೇಗ ಪಡೆಯಲಿವೆ’ ಎಂದು ಹೇಳಿದ್ದಾರೆ.
‘ಇದು ದೇಶಾದ್ಯಂತ ರಾಜ್ಯ ಸರ್ಕಾರಗಳನ್ನು ಬೀಳಿಸಲು ನಡೆಸುವ ಪ್ರಯತ್ನಗಳಿಗೆ ನೀಡಿದ ಬಿಗಿಯಾದ ತಪರಾಕಿ’ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.