Sunday, May 3, 2026
Sunday, May 3, 2026

Admission for Morarji Desai Residential school ರಾಜ್ಯದ ಮೊರಾರ್ಜಿ ದೇಸಾಯಿ ಮತ್ತು ವಾಜಪೇಯಿ ವಸತಿ ಶಾಲೆಗೆ ಪ್ರವೇಶ

Date:

Admission for Morarji Desai Residential school ಶಿವಮೊಗ್ಗ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿ ತರಗತಿಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿದೆ.

 ಅಡಿಯಲ್ಲಿನ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.  ಅರ್ಹ ಅಭ್ಯರ್ಥಿಗಳು ತಮ್ಮ  ಸ್ಟಾಟ್ಸ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಾಸ್‌ಪೋರ್ಟ್ ಸೈಜ್ ಫೋಟೋಗಳ 4 ಪ್ರತಿಗಳು ಹಾಗೂ  ಮೀಸಲಾತಿ ಪ್ರಮಾಣ ಪತ್ರಗಳೊಂದಿಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ದಿ: 20-5-2023 ರೊಳಗಾಗಿ ಸಲ್ಲಿಸಬೇಕು.

Admission for Morarji Desai Residential school ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲೂಕು ಗಾಜನೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪ.ಪೂ.ಕಾಲೇಜಿ, ಪ್ರಾಂಶುಪಾಲರು – 815106322. ಶಿಕಾರಿಪುರ ತಾಲೂಕು ಹೊಸೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪ.ಪೂ.ಕಾಲೇಜಿನ ಪ್ರಾಂಶುಪಾಲರು –8971701958, ಸಾಗರ ತಾಲೂಕು ಆವಿನಹಳ್ಳಿ, ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪ.ಪೂ.ಕಾಲೇಜಿನ ಪ್ರಾಂಶುಪಾಲರು- 9448720441/ 9353361699 ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ- 08182-249241 ಇವರುಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...