Karnataka Elections 2023 ಬಿಜೆಪಿಯಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಸೋಲನಪ್ಪಿದ್ದಾರೆ.
ಇವರ ಪ್ರತಿಸ್ಪರ್ತಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿ ನಕಾಯಿ ಸುಮಾರು 35 ಕ್ಕೂ ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ತಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಕೊನೆಗಳಿಗೆ ಪಕ್ಷ ಬದಲಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸೋಲನ್ನ ಅನುಭವಿಸಿದ್ದಾರೆ.
Karnataka Elections 2023 ಹುಬ್ಬಳ್ಳಿ -ಧಾರವಾಡ ಕೇಂದ್ರ ಕ್ಷೇತ್ರವು ಧಾರವಾಡ ಜಿಲ್ಲೆಯ ಮಾತ್ರವಲ್ಲದೆ ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಲ್ಲಿ ಸತತವಾಗಿ ಆಯ್ಕೆಯಾಗುತ್ತಲೇ ಬಂದಿದ್ದಾರೆ. 2018ರಲ್ಲಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದರು. ಜಯ ಕೂಡ ಗಳಿಸಿದ್ರು. ಆದರೆ ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ದೊರೆತಿಲ್ಲವೆಂದು ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದ್ದರಿಂದ ಈ ಬಾರಿ ಸೋಲನ್ನು ಅನುಭವಿಸಿದ್ದಾರೆ.