Karnataka election news: ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
135 ಸ್ಥಾನಗಳನ್ನ ಗೆದ್ದಿದೆ. 66 ಸ್ಥಾನಗಳಿಗೆ ಬಿಜೆಪಿ ತೃಪ್ತಿಪಟ್ಟುಕೊಳ್ಳಬೇಕಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ
ಹಿರಿಯ ಮಲ್ಲಿಕಾರ್ಜುನ ಖರ್ಗೆ ಸಿಹಿ ಹಂಚಿ ತಮ್ಮ ಸಂತೋಷ ಹಂಚಿಕೊಂಡರು.
ಈ ಮುಂಚರ ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್ ಮುಕ್ತ ಭಾರತ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಲಿಲ್ಲ. ಈಗ ಬಿಜೆಪಿಯೇ ದಕ್ಷಿಣ ಭಾರತ ಮುಕ್ತವಾಗಿದೆ ಎಂದು ತಿಳಿಸಿದರು.
ಪ್ರಣಾಳಿಕೆಯಲ್ಲಿನ ಭರವಸೆಗಳನ್ನ ಸರ್ಕಾರ ರಚನೆಯಾದ ಕೂಡಲೇ ಜಾರಿಗೆ ತರುವ ಬಗ್ಗೆ ಗಮನಕೊಡಿ ಎಂದು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಸಲಹೆ ಮಾಡಿದರು.
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಡಿರುವ ಭರವಸೆಗಳಲ್ಲಿ ಐದನ್ನು ಕ್ಯಾಬಿನೆಟ್ ರಚನೆಯಾದ ದಿನವೇ ಜಾರಿಗೆ ಆದೇಶ ಮಾಡುವುದಾಗಿ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Karnataka election news: ಈ ಬಾರಿಚುನಾವಣೆಯ ಗೆಲುವು ಇಡೀ ಕರ್ನಾಟಕ ಜನತೆಯ ಗೆಲುವು.
ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶವಿತ್ತು .
ಜನತೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಆಶೀರ್ವದಿಸಿದೆ ಎಂದರು.
ರಾಜ್ಯ ಉಸ್ತುವಾರಿ ಸುರ್ಜೆವಾಲಾ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ,ಪ್ರಿಯಾಂಕ ವಾದ್ರಾ ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು.