Canara Bank Rural Self Employment Training ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ. ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.
ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಕೋಳಿ ಸಾಕಾಣಿಕೆ 10 ದಿನಗಳು ಜೂನ್ 6ರಿಂದ ತರಬೇತಿ ಆರಂಭಗೊಳ್ಳುತ್ತದೆ.
ಲೇಡಿಸ್ ಬ್ಯೂಟಿಪಾರ್ಲರ್ 30 ಜೂನ್ 14ರಿಂದ ಆರಂಭ.
ಅಣಬೇ ಬೇಸಾಯ 10, ಜೂನ್ 19ರಿಂದ ತರಬೇತಿ ಆರಂಭ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ
ನಿರ್ದೇಶಕರು,
Canara Bank Rural Self Employment Training ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು- 577216 ಇವರಿಗೆ ಕಳುಹಿಸಿಕೊಡಿ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595,8660062683
ಅಥವಾ ಇಮೇಲ್ – cbrsetiholalur@gmail.com ಸಂಪರ್ಕಿಸಬಹುದು.