Saturday, December 6, 2025
Saturday, December 6, 2025

Dr. A.P.J. Abdul Kalam Residential School  ಮೇಲಿನ ಹನಸವಾಡಿಯ ಡಾ.ಎಪಿಜೆ ಅಬ್ದುಲ್ ಕಲಾಂ ಹೆಣ್ಣು ಮಕ್ಕಳ ವಸತಿ ಶಾಲೆ ಪ್ರವೇಶಾತಿಗೆ ಅರ್ಜಿ

Date:

Dr. A.P.J. Abdul Kalam Residential School  2023-24 ನೇ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲಿನ ಹನಸವಾಡಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ದಾಖಲೆಗಳ ಸಹಿತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜಿಗೆ ತೆರಳಿ ಪ್ರಾಂಶುಪಾಲರ ಮೂಲಕ ಮೇ- 25ರೊಳಗೆ ಉಚಿತವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಶೇ.75 ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳಿಗೆ
ಮೀಸಲಿರಿಸಲಾಗಿದೆ.

ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ ಸರ್ಕಾರಿ/ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳನ್ನು ಮೀರಿರಬಾರದು.
ವಿಕಲಚೇತನರಿಗೆ ಶೇ.3 ರಷ್ಟು ಪ್ರವೇಶ ಮೀಸಲಿರಿಸಿದೆ.

ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ ಮತ್ತು ವಸತಿ, ಸಮವಸ್ತç, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ ಹಾಗೂ ವಾಣ ಜ್ಯ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

Dr. A.P.J. Abdul Kalam Residential School  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ದೂ. ಸಂಖ್ಯೆ :08182-220206/ 9483623537 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...