Saturday, December 6, 2025
Saturday, December 6, 2025

Diploma Admission 2023 ಮೈಸೂರಿನ ರಂಗಾಯಣದಲ್ಲಿ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ

Date:

Diploma Admission 2023 ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಪ್ರತಿವರ್ಷ ರಂಗಶಿಕ್ಷಣದಲ್ಲಿ 10 ತಿಂಗಳ ಡಿಪ್ಲೊಮೊ ಕೋರ್ಸ್ ನ್ನೂ ನಡೆಸುತ್ತಿದೆ. 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದ್ದು, ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ.

2023-24ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000/-ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುತ್ತದೆ.

Diploma Admission 2023 ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ದಿನಾಂಕ:15-05-2023ರಿಂದ ರಂಗಾಯಣದ ವೆಬ್‍ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230/-, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180/-ಗಳು (ರಂಗಕೈಪಿಡಿ ಶುಲ್ಕ ರೂ.30/- ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ದಿನಾಂಕ:05-06-2023 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುತ್ತದೆ.

ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ:0821-2512639, 9448938661 / 9148827720 / 8867514311 ಅನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...